ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧಗಂಗೆಯಲ್ಲಿ ಕೋಟಿಲಿಂಗೇಶ್ವರ: 20ರಂದು ಅಡಿಗಲ್ಲು

Last Updated 17 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ತುಮಕೂರಿನ ಸಿದ್ಧಗಂಗಾ ಕ್ಷೇತ್ರದಲ್ಲಿ  ಬೃಹತ್ ಕೋಟಿಲಿಂಗೇಶ್ವರ ಪ್ರತಿಷ್ಠಾಪನೆಗೆ ಇದೇ 20ರಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶಂಕುಸ್ಥಾಪನೆ ನೆರವೇರಿಸುವರು.

`111 ಅಡಿ ಅಗಲ ಮತ್ತು 121 ಅಡಿ ಎತ್ತರದ ಶಿವ ಲಿಂಗವನ್ನು ನಿರ್ಮಿಸಲಾಗುತ್ತಿದೆ. ಈ ಬೃಹತ್ ಲಿಂಗದಲ್ಲಿ ಒಂದು ಕೋಟಿ ಸಣ್ಣ ಗಾತ್ರದ ಶಿವಲಿಂಗಗಳನ್ನು ಅಳವಡಿಸಲಾಗುತ್ತದೆ. ಆ ಮೂಲಕ ಇದು ವಿಶ್ವದ ಪ್ರಥಮ ಕೋಟಿಲಿಂಗೇಶ್ವರ ಮೂರ್ತಿ ಆಗಲಿದೆ~ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆದ ಕೋಟಿಲಿಂಗೇಶ್ವರ ಪ್ರತಿಷ್ಠಾಪನಾ ಸಮಿತಿ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ವಿವರಿಸಿದರು.

`ಲಿಂಗದ ಶಿಖರ ಭಾಗದಲ್ಲಿ ಶಿವನ ಐದು ಮುಖಗಳ ಶಿಲ್ಪವನ್ನು ರೂಪಿಸಲಾಗುತ್ತದೆ. ಈ ರೀತಿಯ ಶಿಲ್ಪ ನೇಪಾಳದ ಪಶುಪತಿನಾಥ ಕ್ಷೇತ್ರದಲ್ಲಿದೆ. ಅದು ಇನ್ನು ಮುಂದೆ ಸಿದ್ಧಗಂಗೆಯಲ್ಲೇ ದರ್ಶನವಾಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಯೋಜನೆಗೆ ಸುಮಾರು 12 ಕೋಟಿ ರೂಪಾಯಿ ವೆಚ್ಚ ತಗಲುವ ಸಾಧ್ಯತೆ ಇದ್ದು, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲಾಗುವುದು~ ಎಂದರು.

`ಶಿವರಾತ್ರಿಯ ದಿನ ಮುಖ್ಯಮಂತ್ರಿ ಶಂಕುಸ್ಥಾಪನೆ ನೆರವೇರಿಸಲಿದ್ದು, ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡೇ ಈ ಬೃಹತ್ ಲಿಂಗದ ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ಸಿಮೆಂಟ್‌ನಿಂದಲೇ ನಿರ್ಮಿಸಲಾಗುವುದು~ ಎಂದು ನಿರ್ಮಾಣದ ಉಸ್ತುವಾರಿ ಹೊತ್ತಿರುವ ಗುಣಮಟ್ಟ ಕಾರ್ಯಪಡೆ ಅಧ್ಯಕ್ಷ ಡಾ.ವಿಶ್ವನಾಥ್ ತಿಳಿಸಿದರು.

`ಲಿಂಗದ ಸಮಿತಿಯ ಖಜಾಂಚಿಯೂ ಆದ ಶಾಸಕ ಅರವಿಂದ ಲಿಂಬಾವಳಿ, ಸಂಚಾಲಕ ಡಾ.ಬಿ.ಟಿ.ರುದ್ರೇಶ್ ಸೇರಿದಂತೆ ಇತರರು ಾಜರಿದ್ದರು.
 

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT