ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಕರೆ ವಿರುದ್ಧ ಸಿ.ಎಂ ಕಿಡಿ

108 ಆಂಬುಲೆನ್ಸ್‌ ಸೇವೆ ಬಳಕೆ
Last Updated 25 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘108’ ಆಂಬುಲೆನ್ಸ್‌ ಸೇವೆಗಳಿಗೆ ಸುಳ್ಳು ಕರೆ ಮಾಡು­ವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಆರೋಗ್ಯ ಕವಚ ಯೋಜನೆಗೆ 198 ಆಂಬು ಲೆನ್ಸ್‌ಗಳನ್ನು ಹೊಸದಾಗಿ ಸೇರ್ಪಡೆಗೊಳಿಸಿದ ನಂತರ ಮಾತನಾಡಿದ ಅವರು, ಸುಳ್ಳು ಕರೆ ಮಾಡು­ವವರು ಬಡವರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವುದಕ್ಕೆ ತೊಂದರೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘70 ಸಾವಿರ ಜನರಿಗೆ ಒಂದು ಆಂಬುಲೆನ್ಸ್‌ ಲಭ್ಯವಿರುವಂತೆ ಮಾಡುವುದು ನಮ್ಮ ಆದ್ಯತೆ’ ಎಂದು ಸಿದ್ದರಾಮಯ್ಯ ಹೇಳಿದರು. ದ್ವಿಚಕ್ರ ವಾಹನದ ಮೂಲಕ ಆಂಬುಲೆನ್ಸ್‌ ಸೇವೆ ನೀಡುವ ವ್ಯವಸ್ಥೆ ಜನವರಿ ಮೊದಲ ವಾರದಿಂದ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ತಿಳಿಸಿದರು.

‘ರಾಜ್ಯದಲ್ಲಿ ವಿಮಾನದ ಮೂಲಕ ಆಂಬುಲೆನ್ಸ್‌ ಸೇವೆ ಒದಗಿಸಲು ಹಲವು ಕಂಪೆನಿಗಳು ಆಸಕ್ತಿ ತೋರಿವೆ. ಇನ್ನೊಂದು ವರ್ಷದಲ್ಲಿ ಈ ಯೋಜನೆ ಜಾರಿಗೆ ಬರಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಯುಪಿಎ ಸರ್ಕಾರ ರಾಜ್ಯಕ್ಕೆ 100 ಆಂಬುಲೆನ್ಸ್‌ಗಳನ್ನು ಮಂಜೂರು ಮಾಡಿತ್ತು. ರಾಜ್ಯ ಸರ್ಕಾರ 98 ಆಂಬುಲೆನ್ಸ್‌ಗಳನ್ನು ಖರೀದಿಸಿದೆ. ಹೊಸದಾಗಿ 198 ಆಂಬುಲೆನ್ಸ್‌ಗಳು ಸೇವೆಗೆ ಲಭ್ಯವಾಗುವುದರಿಂದ, ತುರ್ತು ಆರೋಗ್ಯ ಸೇವೆಗಳು ಹೆಚ್ಚಿನ ಜನರಿಗೆ ಲಭ್ಯವಾಗಲಿವೆ ಎಂದು ಖಾದರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT