ಬೆಂಗಳೂರು: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ರಂಗಕರ್ಮಿ ಸಿ.ಆರ್.ಸಿಂಹ ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ.

ಒಂದು ವರ್ಷದಿಂದ ಪ್ರಾಸ್ಟೆಟ್ ಗ್ರಂಥಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಅವರು ಚಿಕಿತ್ಸೆಗೆಂದು ಮೂರು ದಿನಗಳ ಹಿಂದೆಯಷ್ಟೆ ಬನಶಂಕರಿಯ ಮೊನೊಟೈಪ್ ಬಳಿ ಇರುವ ಸೇವಾಶ್ರಮ ಆಸ್ಪತ್ರೆಗೆ ದಾಖಲಾದರು.

ಆದರೆ ಗುರುವಾರ ಅವರು ತೀವ್ರ ಅಸ್ವಸ್ಥರಾಗಿದ್ದು, ಪ್ರಜ್ಞಾಶೂನ್ಯ ಸ್ಥಿತಿಗೆ ಜಾರಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆಸ್ಪತ್ರೆಗೆ ಭೇಟಿ ನೀಡಿದ ವಾರ್ತಾ ಸಚಿವ ಆರ್.ರೋಷನ್ ಬೇಗ್, ‘ಸಾಂಸ್ಕೃತಿಕ ಕ್ಷೇತ್ರಕ್ಕೆ ತನ್ನದೇ ಕೊಡುಗೆ ನೀಡಿರುವ ಸಿಂಹ ಅವರ ಆರೋಗ್ಯ ಬೇಗ ಸುಧಾರಿಸಲಿ. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ’ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಉಮಾಶ್ರೀ ಆಸ್ಪತ್ರೆಗೆ ಭೇಟಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.