ನೆಲಮಂಗಲ: ರೈತ ಹಾಗೂ ಪರಿಸರ ಸ್ನೇಹಿ ಹೈನುಗಾರಿಕೆಯನ್ನು ಉಪ ಕಸುಬನ್ನಾಗಿಸಿಕೊಳ್ಳಲು ಸಣ್ಣ ಹಿಡುವಳಿದಾರರಿಗೆ ಹಸುಗಳನ್ನು ವಿತರಿಸಲಾಗುತ್ತಿದೆ. ಹೈನುಗಾರಿಕೆಯಿಂದ ಆದಾಯ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಜಿ.ಪಂ. ಸದಸ್ಯ ಎಂ.ಎನ್.ರಾಮ್ ಅಭಿಪ್ರಾಯಪಟ್ಟರು.

ಜಿ.ಪಂ.ನ ಆದಾಯ ಉತ್ಪನ್ನ ಚಟುವಟಿಕೆ ಯೋಜನೆಯಡಿ ತಾಲ್ಲೂಕಿನ ಕೋಡಪ್ಪನಹಳ್ಳಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರೈತರಿಗೆ ಹಸುಗಳನ್ನು ವಿತರಿಸಿ ಅವರು ಮಾತನಾಡಿದರು.

ಜೆಡಿಎಸ್ ಮುಖಂಡ ಕೋಡಪ್ಪನಹಳ್ಳಿ ವೆಂಕಟೇಶ್, ರೈತರು ಮಣ್ಣು ಪರೀಕ್ಷಿಸಿ, ಮಾರುಕಟ್ಟೆ ವಿಶ್ಲೇಷಿಸಿ, ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಸೂಕ್ತವಾದ ಬೆಳೆ ಬೆಳೆಯಬೇಕು ಎಂದು ಸಲಹೆ ಮಾಡಿದರು.

ಇದೇ ಸಂದರ್ಭದಲ್ಲಿ ಗ್ರಾ.ಪಂ. ವ್ಯಾಪ್ತಿಯ ಆಯ್ದ 20 ಮಂದಿ ಫಲಾನುಭವಿಗಳಿಗೆ ಹಸುಗಳನ್ನು ವಿತರಿಸಲಾಯಿತು. ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಮುನಿರಾಮಯ್ಯ, ಗ್ರಾ.ಪಂ. ಸದಸ್ಯ ನಾರಾಯಣ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಂಗಬೈಲಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.