ಬೆಂಗಳೂರು: ‘ಜಾತಿನಿರ್ಮೂಲನೆಗೆ ಅಂತರ್ಜಾತಿ ವಿವಾಹವೇ ಪರಿಹಾರ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ದಲಿತ ಹೆಣ್ಣುಮಗಳನ್ನು ಮದುವೆಯಾಗುವ ಮೂಲಕ ಈ ವಿಚಾರದಲ್ಲಿ ದೇಶದ ಯುವಕರಿಗೆ ಮಾದರಿಯಾಗಬೇಕು’ ಎಂದು ಭಾರತೀಯ ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷ ರಾಮ್‌ದಾಸ್ ಅಠಾವಳೆ ಹೇಳಿದರು.

ಸಮತಾ ಸೈನಿಕ ದಳ ಮತ್ತು ಭಾರತೀಯ ರಿಪಬ್ಲಿಕನ್ ಪಕ್ಷ ನಗರದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಮುಖಂಡರ ಸಮಾವೇಶದಲ್ಲಿ ಮಾತನಾಡಿದರು.

‘ದೇಶದಲ್ಲಿ ಅಂತರ್ಜಾತಿ ವಿವಾಹಕ್ಕೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡಬೇಕು. ಅಂತರ್ಜಾತಿ ವಿವಾಹವಾದವರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಮುಂದಾಗಬೇಕು’ ಎಂದು ಒತ್ತಾಯಿಸಿದರು.

‘ಭೂಸುಧಾರಣೆಯ ಕಾನೂನುಗಳು ರಾಜ್ಯದಲ್ಲಿ ಸಮರ್ಪಕವಾಗಿ ಜಾರಿಗೆ ಬಂದಿಲ್ಲ. ಭೂರಹಿತ ದಲಿತರಿಗೆ ಜಮೀನು ಹಂಚಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಆಸಕ್ತಿ ವಹಿಸಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.