ಬೆಂಗಳೂರು: ‘ಉತ್ತಮ ಪತ್ರಕರ್ತರನ್ನು ರೂಪಿಸಲು ವಿಶ್ವವಿದ್ಯಾಲಯಗಳ ಪತ್ರಿಕೋದ್ಯಮ ವಿಭಾಗಗಳು ಹಾಗೂ ಮಾಧ್ಯಮ ಸಂಸ್ಥೆಗಳ ನಡುವೆ ಸೇತುವೆ ನಿರ್ಮಿಸುವ ಅಗತ್ಯ ಇದೆ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ವಿಭಾಗದ ನಿವೃತ್ತ ಮುಖ್ಯಸ್ಥ ಡಾ.ಎಚ್.ಎಸ್. ಈಶ್ವರ್ ತಿಳಿಸಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಭಾರತೀಯ ವಿದ್ಯಾಭವನದ ಸಹಯೋಗದಲ್ಲಿ ಭಾರತೀಯ ವಿದ್ಯಾಭವನದಲ್ಲಿ ಸೋಮವಾರ ನಡೆದ ‘ಮಾಧ್ಯಮ ವೃತ್ತಿ ತರಬೇತಿ– ಸವಾಲು ಹಾಗೂ ಸಾಧ್ಯತೆಗಳ ಚರ್ಚೆ’ಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಬೋಧನೆ ಮಾಡುವ ಹಾಗೂ ತರಬೇತಿ ನೀಡುವ ವಿಷಯದಲ್ಲಿ ಉಭಯ ಸಂಸ್ಥೆಗಳ ನಡುವೆ ಒಪ್ಪಂದ ಏರ್ಪಡಬೇಕು’ ಎಂದು ಅವರು ಕಿವಿಮಾತು ಹೇಳಿದರು.

‘ಪತ್ರಿಕೋದ್ಯಮ ವಿಭಾಗಗಳಲ್ಲಿ ಈಗ ಬೋಧಿಸುತ್ತಿರುವ ಪಠ್ಯಕ್ರಮಗಳು 50 ವರ್ಷಗಳ ಹಿಂದಿನವು. ಹೀಗಾಗಿ ಪಠ್ಯಕ್ರಮದ ಬದಲಾವಣೆ ಮಾಡುವ ಅವಶ್ಯಕತೆ ಇದೆ’ ಎಂದು ಅವರು ಪ್ರತಿಪಾದಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಜಿ. ಕೃಷ್ಣನ್ ಕಾರ್ಯಕ್ರಮ ಉದ್ಘಾಟಿಸಿ, ‘ಮಾಧ್ಯಮದವರು ಎಷ್ಟರ ಮಟ್ಟಿಗೆ ಸಮಾಜವನ್ನು, ಸಾರ್ವಜನಿಕ ಅಭಿಪ್ರಾಯವನ್ನು ಬದಲಿಸಬಲ್ಲರು ಎಂಬುದು ಚರ್ಚೆಗೆ ಅರ್ಹವಾದ ವಿಷಯ. ಇಂಗ್ಲೆಂಡಿನ ‘ಇಂಡಿಪೆಂಡೆಂಟ್’ ಪತ್ರಿಕೆಯ ಮಾದರಿಯಲ್ಲೇ ನಮ್ಮ ಪತ್ರಿಕೆಗಳು ರೂಪುಗೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.