ಬೆಂಗಳೂರು: ಬೆಂಗಳೂರಿನಲ್ಲಿ ಮಾಲಿನ್ಯದ ಪ್ರಮಾಣ ಶೇಕಡ 42.2ರಷ್ಟಿದ್ದು, ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಪ್ರೆಟ್ರೋಲಿಯಂ ಸಚಿವ ಎಂ.ವೀರಪ್ಪ ಮೊಯಿಲಿ ಆತಂಕ ವ್ಯಕ್ತಪಡಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಆಶ್ರಯದಲ್ಲಿ ಶನಿವಾರ ನಗರದಲ್ಲಿ ನಡೆದ ‘58 ನೇ ರಾಷ್ಟ್ರಮಟ್ಟದ ಮಾಲಿನ್ಯ ನಿಯಂತ್ರಣ ಮಂಡಳಿಗಳ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಭೆ’ಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ದೆಹಲಿ, ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತ ವಿಶ್ವದಲ್ಲೇ ಅತಿ ಹೆಚ್ಚು ಮಲಿನಗೊಂಡಿರುವ ನಗರಗಳು ಎಂಬ ಕುಖ್ಯಾತಿಗೆ ಪಾತ್ರವಾಗಿವೆ. ಅದೇ ದಾರಿಯಲ್ಲಿ ಈಗ ಬೆಂಗಳೂರು ಸಹ ಸಾಗಿದೆ ಎಂದರು.

ಹೆಚ್ಚುತ್ತಿರುವ ಜನಸಂಖ್ಯೆ, ವಾಹನಗಳ ಸಂಖ್ಯೆ, ದೊಡ್ಡ ದೊಡ್ಡ ಕೈಗಾರಿಕೆಗಳಿಂದಾಗಿ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಇದಕ್ಕೆ ಪ್ರಪಂಚದ ಪ್ರತಿಯೊಂದು ದೇಶದ ಕೊಡುಗೆ ಸಮ ಪ್ರಮಾಣದಲ್ಲಿದೆ. ಇದರಿಂದಾಗಿ ಒಂದು ಮತ್ತು ಎರಡನೇ ಮಹಾ ಯುದ್ಧದಲ್ಲಿ ಸಾವನ್ನಪ್ಪಿದ ಜನರ ಸಂಖ್ಯೆಗಿಂತ ನೂರು ಪಟ್ಟು ಜನರು ಮಾಲಿನ್ಯದಿಂದಾಗಿ ಬರುತ್ತಿರುವ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ ಎಂದರು.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸುಶೀಲ್ ಕುಮಾರ್ ಮಾತನಾಡಿ, 10 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ನಗರಗಳಲ್ಲಿ, ಧಾರ್ಮಿಕ ಹಾಗು ಐತಿಹಾಸಿಕ ಸ್ಥಳಗಳಲ್ಲಿ ವಾಯು ಮಾಲಿನ್ಯ ಮಾಪನ ಕೇಂದ್ರಗಳನ್ನು ಸ್ಥಾಪಿಸುವುದು, ಅಂತರ್ಜಲ ಬಳಕೆಗೆ ಮಾನದಂಡ ರೂಪಿಸುವುದು, ಜಲ ಮಾಲಿನ್ಯ ನಿರ್ವಹಣಾ ಮಂಡಳಿ ಸ್ಥಾಪನೆ, ದೊಡ್ಡ ದೊಡ್ಡ ಕೈಗಾರಿಕೆಗಳಲ್ಲಿ ಅದರ ಮಾಲೀಕರೆ ಮಾಲಿನ್ಯ ನಿಯಂತ್ರಣ ಮಾಪಕ ಅಳವಡಿಸಿಕೊಳ್ಳುವುದೂ ಸೇರಿದಂತೆ ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಪರಿಸರ ಸಚಿವ ಬಿ.ರಮಾನಾಥ ರೈ ಮಾತನಾಡಿ, ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಅದರಲ್ಲೂ ತ್ಯಾಜ್ಯ ವಿಲೇವಾರಿ ಹಾಗೂ ಘನ ತ್ಯಾಜ್ಯ ನಿರ್ವಹಣೆಯೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದರ ಪರಿಹಾರಕ್ಕಾಗಿ ಉತ್ತಮ ತಂತ್ರಜ್ಞಾನದ ಅಗತ್ಯ ಇದೆ ಎಂದರು.

ದೇಶವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದುತ್ತಿದೆ. ದೇಶದ ಅಭಿವೃದ್ಧಿಗೆ ಕೈಗಾರಿಕೆಗಳ ಕೊಡುಗೆಯೇ ಅತ್ಯಂತ ಪ್ರಮುಖವಾಗಿದೆ. ಆದರೆ ಅವುಗಳಿಂದ ಪರಿಸರದ ಮೇಲೆ ದುಷ್ಪರಿಣಾಮ ಹೆಚ್ಚುತ್ತಿದೆ. ಪರಿಸರಕ್ಕೆ ಹಾನಿಯಾಗದಂತೆ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.