ಬೆಂಗಳೂರು: ಸರ್ಕಾರಿ ಹಾಗೂ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಅಂತರ್ಜಾಲದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಆವಲಹಳ್ಳಿ ಸಮೀಪದ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಇತ್ತೀಚೆಗೆ ‘ವಿದ್ಯಾರ್ಥಿಗಳ ಅಂತರ್ಜಾಲ ಪ್ರಪಂಚ– 2013’ ಕಾರ್ಯಕ್ರಮ ಆಯೋಜಿಸಿತ್ತು.

ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಮೋದ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜಿನಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಮೊದಲ ದಿನ ಹೊಸಕೋಟೆ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಅಂತರ್ಜಾಲದ ಬಗ್ಗೆ ಮಾಹಿತಿ ನೀಡಲಾಯಿತು.

‘ಕಳೆದ ಐದು ವರ್ಷಗಳಿಂದ ಶಿಕ್ಷಣ ಇಲಾಖೆ ನಡೆಸಿಕೊಂಡು ಬರುತ್ತಿರುವ ಈ ಅಭಿಯಾನದಿಂದ ಗ್ರಾಮಾಂತರ ಪ್ರದೇಶದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಹಾಗೂ ಅಂತರ್ಜಾಲದ ಬಗ್ಗೆ ತಿಳಿದುಕೊಳ್ಳಲು ಸಹಾಯವಾಗಿದೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆಯಬೇಕು’ ಎಂದು ಪ್ರಮೋದ್ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ವಿಭಾಗದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಅಂತರ್ಜಾಲದ ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.