‘ವಸ್ತುಪ್ರದರ್ಶನ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ’

7

‘ವಸ್ತುಪ್ರದರ್ಶನ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ’

Published:
Updated:
Deccan Herald

ರಾಮನಗರ: ವಿದ್ಯಾರ್ಥಿಗಳಲ್ಲಿನ ಕ್ರಿಯಾತ್ಮಕ ಯೋಜನೆಗಳನ್ನು ಹೊರ ತರಲು ವಸ್ತು ಪ್ರದರ್ಶನಗಳು ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್. ಮರೀಗೌಡ ಹೇಳಿದರು.

ಇಲ್ಲಿನ ಸರ್ಕಾರಿ ಐಜೂರಿನ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತಿ ಫೌಂಡೇಷನ್ ಹಾಗೂ ಎಸ್‌ಡಿಎಂಸಿ ಸಹಯೋಗದಲ್ಲಿ ಶನಿವಾರ ನಡೆದ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ವಸ್ತು ಪ್ರದರ್ಶನಗಳಿಂದಾಗಿ ವಿದ್ಯಾರ್ಥಿಗಳ ಜತೆಗೆ ಶಿಕ್ಷಕರು ಜ್ಞಾನಮಟ್ಟವನ್ನು ಹೆಚ್ಚಿಸಿಕೊಳ್ಳಲು ಅವಕಾಶವಿದೆ. ಪಠ್ಯದ ವಿಷಯಗಳನ್ನು ವಸ್ತುಗಳ ಮೂಲಕ ತಿಳಿಸಿಕೊಡುವಂತೆ ಆಗುತ್ತದೆ ಎಂದು ಹೇಳಿದರು.

ಭಾರತಿ ಫೌಂಡೇಷನ್‌ನ ಸಹಾಯಕ ವ್ಯವಸ್ಥಾಪಕ ಜೋಶಿ ಮಾತನಾಡಿ, ರಸಪ್ರಶ್ನೆ ಸೇರಿದಂತೆ ಸ್ಪೆಲಿಂಗ್ ವಿಜಾರ್ಡ್‌ ಕಾರ್ಯಕ್ರಮಗಳನ್ನು ತಾಲ್ಲೂಕಿನ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳು ಪಠ್ಯ ಪುಸ್ತಕದಲ್ಲಿನ ವಿಷಯಗಳ ಮಾದರಿ ತಯಾರು ಮಾಡಿ, ವಸ್ತು ಪ್ರದರ್ಶನಕ್ಕೆ ಹಾಜರು ಪಡಿಸಿದ್ದರು.

ಅಗಸ್ತ್ಯ ಫೌಂಡೇಷನ್‌ ಸಂಯೋಜಕ ವೀರಣ್ಣ ಗೌಡ, ಶಾಲೆಯ ಮುಖ್ಯಶಿಕ್ಷಕ ಕೇಶವಪ್ಪ ನಾಯಕ, ಎಸ್ ಡಿಎಂಸಿ ಅಧ್ಯಕ್ಷೆ ಲಕ್ಷ್ಮಿ, ಸದಸ್ಯರಾದ ಅಬ್ದುಲ್ ಅಜೀಜ್‌, ಲತಾ, ಶಾರದ, ರೇಷ್ಮ, ದೇವರಾಜು ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !