ಸೋಮವಾರ, ಸೆಪ್ಟೆಂಬರ್ 16, 2019
29 °C

ಸರಳವಾಗಿ ಭಗೀರಥ ಜಯಂತಿ ಆಚರಣೆ

Published:
Updated:
Prajavani

ಶಿವಮೊಗ್ಗ: ಜಿಲ್ಲಾಡಳಿತ ಹಾಗೂ ಜಿಲ್ಲಾ ಉಪ್ಪಾರ ಸಮಾಜದ ವತಿಯಿಂದ ಭಗೀರಥ ಮಹರ್ಷಿಗಳ ಜಯಂತಿ ಕಾರ್ಯಕ್ರಮವನ್ನು ಶನಿವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ಸತ್ಯನಾರಾಯಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಡಿ.ಆರ್.ರೇಖಾ ಉಮೇಶ್, ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್‌.ಮಂಜುನಾಥ್, ಉಪ್ಪಾರ ಸಹಕಾರ ಸಂಘದ ಅಧ್ಯಕ್ಷ ಕೆ.ದೇವೇಂದ್ರಪ್ಪ, ಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಮಾಜಿ ಸದಸ್ಯ ಬೊಮ್ಮನಕಟ್ಟೆ ಮಂಜುನಾಥ್ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ನಂತರ ಉಪ್ಪಾರ ಸಮಾಜದಿಂದ ಗೋಪಿ ವೃತ್ತದಲ್ಲಿ ಸಾರ್ವಜನಿಕರಿಗೆ ಉಚಿತ ಮಜ್ಜಿಗೆ ವಿತರಿಸಲಾಯಿತು.

Post Comments (+)