ಮೋದಿ ಸಾಧನೆಯೇ ಬಿಜೆಪಿಗೆ ಶ್ರೀರಕ್ಷೆ: ಭಾರತಿಶೆಟ್ಟಿ

ಭಾನುವಾರ, ಮೇ 26, 2019
33 °C

ಮೋದಿ ಸಾಧನೆಯೇ ಬಿಜೆಪಿಗೆ ಶ್ರೀರಕ್ಷೆ: ಭಾರತಿಶೆಟ್ಟಿ

Published:
Updated:

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಸಾಧನೆಗಳೇ ನಮಗೆ ಶ್ರೀರಕ್ಷೆ. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಸಮಯದಲ್ಲಿನ ಅಭಿವೃದ್ಧಿ ಕಾರ್ಯಗಳು. ಸಂಸದರಾಗಿ ರಾಘವೇಂದ್ರ ಮಾಡಿದ ಕೆಲಸ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದಲ್ಲಿ ಹಲವು ವರ್ಷ ಕಾಂಗ್ರೆಸ್ ಆಡಳಿತ ನಡೆಸಿದೆ. ಆದರೆ, ಸಾಧನೆ ಶೂನ್ಯ. ಮೋದಿ ಅವರು ಕೇವಲ 5 ವರ್ಷಗಳಲ್ಲಿ ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದಾರೆ. ವಿಶೇಷವಾಗಿ ಮಹಿಳಾ ಸ್ವಾವಲಂಬನೆಗೆ ಒತ್ತು ನೀಡಿದ್ದಾರೆ. ಅವರ ಬದುಕು ಹಸನು ಮಾಡಿದ್ದಾರೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

ಭೇಟಿ ಬಚಾಚ್ ಭೇಟಿ ಪಡಾವ್, ಮುದ್ರಾ, ಸುಕನ್ಯಾ, ಉಜ್ವಲ್ ಯೋಜನೆ ಜನಪ್ರಿಯವಾಗಿವೆ. ಅಂಗನವಾಡಿ, ಆಶಾಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸಿದ ಕೀರ್ತಿ ಪ್ರಧಾನಿಗೆ ಸಲ್ಲುತ್ತದೆ. ತ್ರಿವಳಿ ತಲಾಕ್ ರದ್ದು ಪಡಿಸುವ ಮೂಲಕ ಮುಸ್ಲಿಂ ಮಹಿಳೆಯರಿಗೆ ಬೆಳಕು ಕೊಡಲಾಗಿದೆ ಎಂದರು.

ಅಭಿವೃದ್ದಿಯೇ ನಮ್ಮ ಮಂತ್ರ, ರಾಷ್ಟ್ರೀಯತೆ ಮತ್ತು ಸಾಧನೆ ಮೂಲಕ ಜನರ ಬಳಿ ಹೋಗುತ್ತೇವೆ. ಮಹಿಳೆಯರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಕೈಗೊಂಡ ಹಲವು ಕಾರ್ಯಕ್ರಮಗಳನ್ನು ತಲುಪಿಸುತ್ತೇವೆ ಎಂದು ಮಾಹಿತಿ ನೀಡಿದರು.

ಮಧು ಬಂಗಾರಪ್ಪ ಪರ ಪ್ರಚಾರ ನಡೆಸುತ್ತಿರುವ ಗೀತಾ ಶಿವರಾಜ್ ಕುಮಾರ್ ಯಡಿಯೂರಪ್ಪ ಅವರ ವಿರುದ್ಧ ಸುಳ್ಳು ಹೇಳುತ್ತಿದ್ದಾರೆ. ಶಿವಮೊಗ್ಗದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ. ಬಿ.ವೈ.ರಾಘವೇಂದ್ರ ಅವರು ರೈಲ್ವೆ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಜಿಲ್ಲೆಗೆ ತಂದಿದ್ದಾರೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಪಕ್ಷದ ಮುಖಂಡರಾದ ಮಂಜುಳಾ, ಪದ್ಮಿನಿ, ಅನಿತಾ ರವಿಶಂಕರ್, ವಿದ್ಯಾ ಲಕ್ಷ್ಮೀಪತಿ, ಸುವರ್ಣ ಶಂಕರ್, ಹೇಮಾವತಿ, ಗೀತಾ ಮಲ್ಲಿಕಾರ್ಜುನಾ, ಶೋಭಾ, ಸುಧಾಮಣಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !