ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸ್ತೂರಿ ರಂಗನ್‌ಗೆ ಅಧಿಕೃತ ಆಹ್ವಾನ

ಭಾಸ್ಕರಾಚಾರ್ಯ ರಾಷ್ಟ್ರೀಯ ವಿಜ್ಞಾನ ಪ್ರಶಸ್ತಿ
Last Updated 10 ಆಗಸ್ಟ್ 2019, 10:33 IST
ಅಕ್ಷರ ಗಾತ್ರ

ಸಿಂದಗಿ: ಪಟ್ಟಣದ ಸಾರಂಗಮಠ- ಗಚ್ಚಿನಮಠದ ಚನ್ನವೀರ ಸ್ವಾಮೀಜಿ ಪ್ರತಿಷ್ಠಾನ ಕೊಡಮಾಡುವ ರಾಷ್ಟ್ರಮಟ್ಟದ ಭಾಸ್ಕರಾಚಾರ್ಯ ವಿಜ್ಞಾನ ಪ್ರಶಸ್ತಿಗೆ ಆಯ್ಕೆಯಾಗಿರುವ ಬಾಹ್ಯಾಕಾಶ ವಿಜ್ಞಾನಿ ಡಾ.ಕೆ.ಕಸ್ತೂರಿರಂಗನ್ ಅವರನ್ನು ಭೇಟಿ ಮಾಡಿದ ಪ್ರತಿಷ್ಠಾನದ ಸಂಚಾಲಕ ಡಾ.ಪ್ರಭು ಸಾರಂಗದೇವ ಶ್ರೀ ಅಧಿಕೃತ ಆಹ್ವಾನ ನೀಡಿದರು.

‘ಪ್ರತಿಷ್ಠಾನದ ಕಾರ್ಯ ವೈಖರಿಯನ್ನು ಅವಲೋಕಿಸಿದ ಕಸ್ತೂರಿರಂಗನ್ ಅವರು ಶ್ರೀಗಳಿಗೆ ಒಪ್ಪಿಗೆ ಪತ್ರ ನೀಡಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 25ರಂದು ಸಿಂದಗಿ ಪಟ್ಟಣದಲ್ಲಿ ನಡೆಯಲಿದೆ’ ಎಂದು ಪ್ರತಿಷ್ಠಾನದ ಸಂಚಾಲಕರು ಶುಕ್ರವಾರ ‘ಪ್ರಜಾವಾಣಿ’ಗೆ ತಿಳಿಸಿದರು.

ಈ ಪ್ರಶಸ್ತಿಯನ್ನು ಈಗಾಗಲೇ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ವಿಜ್ಞಾನಿಗಳಾದ ಸಿ.ಎನ್.ಆರ್.ರಾವ್, ಯು.ಆರ್.ರಾವ್ ಮತ್ತು ಕೃಷಿ ವಿಜ್ಞಾನಿ ಎಸ್.ಎ.ಪಾಟೀಲ ಅವರಿಗೆ ನೀಡಲಾಗಿದೆ. ಪ್ರಸಕ್ತ ಸಾಲಿಗೆ ಕಸ್ತೂರಿರಂಗನ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರತಿಷ್ಠಾನದ ಪದಾಧಿಕಾರಿಗಳು, ಶಾಸಕ ಅರುಣ ಶಹಾಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT