ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರಂಭದಲ್ಲಿ ಕ್ಯಾನ್ಸರ್ ಪತ್ತೆ ಹಚ್ಚಿ: ಡಾ. ಬಿಪಿನ್ ಗೋಯಲ್

Last Updated 7 ನವೆಂಬರ್ 2021, 4:28 IST
ಅಕ್ಷರ ಗಾತ್ರ

ಬೀದರ್: ‘ಪ್ರಾಥಮಿಕ ಹಂತದಲ್ಲೇ ರೋಗ ಪತ್ತೆ ಹಚ್ಚಿ, ಚಿಕಿತ್ಸೆ ಪಡೆದರೆ ಕ್ಯಾನ್ಸರ್‌ನಿಂದ ಗುಣಮುಖರಾಗಲು ಸಾಧ್ಯ’ ಎಂದು ಹೈದರಾಬಾದ್‍ನ ಕ್ಯಾನ್ಸರ್ ತಜ್ಞ ಡಾ. ಬಿಪಿನ್ ಗೋಯಲ್ ಹೇಳಿದರು.

ಇಲ್ಲಿಯ 100 ಹಾಸಿಗೆಗಳ ಪ್ರಸೂತಿ ಆರೈಕೆ ಆಸ್ಪತ್ರೆಯಲ್ಲಿ ಶನಿವಾರ ಆಯೋಜಿಸಿದ ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ಕ್ಯಾನ್ಸರ್ ಬಗ್ಗೆ ಅರಿಯುವುದು ಹಾಗೂ ಮುಂಜಾಗ್ರತೆ ವಹಿಸುವುದು ಬಹಳ ಅವಶ್ಯಕ ಎಂದು ತಿಳಿಸಿದರು.

ತಂಬಾಕು ಹಾಗೂ ತಂಬಾಕಿನ ಉತ್ಪನ್ನಗಳ ಸೇವನೆಯು ಕ್ಯಾನ್ಸರ್‌ಗೆ ಮುಖ್ಯ ಕಾರಣವಾಗಿದೆ. ಇದರಿಂದ ಎಲ್ಲರೂ ದೂರ ಇರಬೇಕು ಎಂದು ಸಲಹೆ ನೀಡಿದರು.

ಶಿಬಿರ ಉದ್ಘಾಟಿಸಿದ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್., ಮಾತನಾಡಿ, ‘ಆಧುನಿಕ ಜೀವನ ಶೈಲಿ, ಆಹಾರ ಪದ್ಧತಿ, ಕಡಿಮೆ ಪೋಷಕಾಂಶ ಹೊಂದಿರುವ ಆಹಾರ ಹಾಗೂ ತಂಬಾಕು ಸೇವನೆಯಿಂದ ಕ್ಯಾನ್ಸರ್ ಪ್ರಮಾಣ ಎಲ್ಲ ವಯೋಮಾನದವರಲ್ಲೂ ಹೆಚ್ಚುತ್ತಿದೆ. ಇದು ಕಳವಳಕಾರಿಯಾಗಿದೆ’ ಎಂದರು.

ಜಿಲ್ಲೆಯ ರೋಗಿಗಳಿಗೆ ನೆರವಾಗಲು ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಬರುವ ದಿನಗಳಲ್ಲಿ ಇಂತಹ ಶಿಬಿರಗಳು ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುವಂತಾಗಬೇಕು ಎಂದು ಹೇಳಿದರು.

ಸಾರ್ವಜನಿಕರು ಕ್ಯಾನ್ಸರ್ ಶಿಬಿರಗಳ ಪ್ರಯೋಜನ ಪಡೆಯಬೇಕು. ರೋಗ ಪೀಡಿತರು ಚಿಕಿತ್ಸೆಗೆ ಒಳಗಾಗಿ, ಆರೋಗ್ಯವಂತ ಬದುಕು ಕಟ್ಟಿಕೊಳ್ಳಬೇಕು ಎಂಬುವುದು ಸರ್ಕಾರದ ಆಶಯ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್ ಮಾತನಾಡಿ, ಕ್ಯಾನ್ಸರ್ ತಪಾಸಣೆ ಮಾಡಿಸಿಕೊಳ್ಳುವುದು ಹಾಗೂ ಆತಂಕಕ್ಕೆ ಒಳಗಾಗದೆ ಚಿಕಿತ್ಸೆ ಪಡೆಯುವುದು ಇಂದಿನ ಅನಿವಾ ರ್ಯತೆಯಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ. ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಬ್ರಿಮ್ಸ್ ನಿರ್ದೇಶಕ ಡಾ.ಚಂದ್ರಕಾಂತ ಚಿಲ್ಲರ್ಗಿ, ಭಾರತೀಯ ವೈದ್ಯಕೀಯ ಸಂಘದ ಡಾ.ವಿ.ವಿ. ನಾಗರಾಜ, ಸ್ತ್ರೀರೋಗ ತಜ್ಞೆ ಡಾ. ಉಮಾ ದೇಶಮುಖ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಸಂಗಾರೆಡ್ಡಿ, ಡಾ. ಮಹಮ್ಮದ್ ಸೊಹೆಲ್ ಇದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ ನಿರೂಪಿಸಿದರು. ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಶ್ರಾವಣ ಜಾಧವ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT