ಬೀದರ್: ಮಹಾ ಶಿವರಾತ್ರಿ ನಿಮಿತ್ತ ಇಲ್ಲಿಯ ಪ್ರಸಿದ್ಧ ಪಾಪನಾಶ ಕ್ಷೇತ್ರದಲ್ಲಿ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ನಿಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಯಿತು.
ಮಹಾ ಶಿವರಾತ್ರಿ ನಿಮಿತ್ತ ಉಪವಾಸ ಮಾಡುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಫೌಂಡೇಷನ್ನಿಂದ ಉಪವಾಸದ ದಿನ ಸೇವಿಸಬಹುದಾದ ಉಪಹಾರ ವಿತರಿಸಲಾಗಿದೆ ಎಂದು ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದರು.
ಮಹಾ ಶಿವರಾತ್ರಿಯು ಬಹುದೊಡ್ಡ ಹಬ್ಬವಾಗಿದ್ದು, ಎಲ್ಲ ಜಾತಿ ಸಮುದಾಯದವರು ಭಕ್ತಿ ಭಾವದಿಂದ ಆಚರಿಸುತ್ತಾರೆ. ಪಾಪನಾಶ ಕ್ಷೇತ್ರದ ಪವಿತ್ರ ಕುಂಡದಲ್ಲಿ ಸ್ನಾನ ಮಾಡಿ, ದರ್ಶನ ಪಡೆದಲ್ಲಿ ಬದುಕು ಪಾವನವಾಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಜನ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತಾರೆ.
ನಾಗಮಾರಪಳ್ಳಿ ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಅವರು ಸ್ವತ: ಭಕ್ತಾದಿಗಳಿಗೆ ಪ್ರಸಾದ ವಿತರಿಸಿದರು. ಶಾಂತು ಗೊರಶೆಟ್ಟಿ, ಮಹೇಶ ಪಾಂಚಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.