ಬೀದರ್: ಕರ್ನಾಟಕದ ಗಡಿಯನ್ನು ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿಗೆ ತೆಲಂಗಾಣ ಸರ್ಕಾರ ₹ 4.49 ಕೋಟಿ ಅನುದಾನ ಒದಗಿಸಿದೆ ಎಂದು ತೆಲಂಗಾಣದ ನಾರಾಯಣಖೇಡದ ಶಾಸಕ ಭೋಪಾಲರೆಡ್ಡಿ ತಿಳಿಸಿದ್ದಾರೆ.

ಬೀದರ್‌ನ ಜನಪದ ಕಲಾವಿದರ ಬಳಗವು 2019ರ ನವೆಂಬರ್ 2 ರಂದು ಬೀದರ್ ತಾಲ್ಲೂಕಿನ ಗಡಿ ಗ್ರಾಮ ಚಿಲ್ಲರ್ಗಿಯಲ್ಲಿ ಹಮ್ಮಿಕೊಂಡಿದ್ದ ಗಡಿನಾಡು ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ರಸ್ತೆ ಸಮಸ್ಯೆ ನನ್ನ ಗಮನಕ್ಕೆ ಬಂದಿತು. ವಿಷಯ ಮುಖ್ಯಮಂತ್ರಿ ಗಮನಕ್ಕೆ ತಂದ ಬಳಿಕ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಗಡಿಭಾಗದ ಜನಕ್ಕೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯವಿದೆ. ಜನಪದ ಕಲಾವಿದರ ಬಳಗ ಈ ದಿಸೆಯಲ್ಲಿ ಕೆಲಸ ಮಾಡುತ್ತಿದೆ. ಗಡಿಯಲ್ಲಿ ಅಭಿವೃದ್ಧಿ ಚಟುವಟಿಕೆಗಳೂ ನಡೆಯಬೇಕಾಗಿದೆ. ಸಂಸ್ಥೆಗೆ ಬೀದರ್ ಜಿಲ್ಲಾಡಳಿತ ಅನುದಾನ ಒದಗಿಸಿದ್ದಲ್ಲಿ ತೆಲಂಗಾಣ ಸರ್ಕಾರ ಕೂಡ ಕೈಜೋಡಿಸಲಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.