ಶುಕ್ರವಾರ, ಸೆಪ್ಟೆಂಬರ್ 25, 2020
29 °C

ಬಾಲಕಿ ಕುಟುಂಬಕ್ಕೆ ₹10 ಲಕ್ಷ ಪರಿಹಾರಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಬೀದರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣದ ತನಿಖೆ ನಡೆಸಬೇಕು ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸಂಸದರ ನಿಧಿಯಿಂದ ₹ 10 ಲಕ್ಷ ಪರಿಹಾರ ಕೊಡಬೇಕು ಎಂದು ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘ ಆಗ್ರಹಿಸಿದೆ.

ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಜಮಾದಾರ್ ಹಾಗೂ ಅಂಬಿಗರ ಚೌಡಯ್ಯ ಯುವ ಸೇನೆಯ ಸಂಸ್ಥಾಪಕ ಅಧ್ಯಕ್ಷ ಸುನೀಲ ಭಾವಿಕಟ್ಟಿ ಶನಿವಾರ ಸಂಸದ ಭಗವಂತ ಖೂಬಾ ಅವರನ್ನು ಭೇಟಿಯಾಗಿ ಅವರಿಗೆ ಮನವಿಪತ್ರ ಸಲ್ಲಿಸಿದರು.

ಬಡ ಕುಟುಂಬ ಬಾಲಕಿಯ ಮೇಲೆ ಅಮಾನವೀಯ ಕೃತ್ಯ ಎಸಗಲಾಗಿದೆ. ಈ ಘಟನೆಯನ್ನು ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ವಹಿಸಬೇಕು. ತನಿಖೆ ನಡೆಸಿ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಮನವಿ  ಮಾಡಿದರು.

ಬಾಲಕಿಯ ಕುಟುಂಬಕ್ಕೆ 3 ಎಕರೆ ಜಮೀನು ಮಂಜೂರು ಮಾಡಲು ಸಂಬಂಧಪಟ್ಟವರಿಗೆ ಸರ್ಕಾರ ಶಿಫಾರಸು ಮಾಡಬೇಕು ಎಂದು ಪ್ರತಿಭಟನಕಾರರು ಮನವಿಯಲ್ಲಿ ಸಂಸದ ಭಗವಂತ ಖೂಬಾರನ್ನು ಒತ್ತಾಯಿಸಿದ್ದಾರೆ.

ಮುಖಂಡರಾದ ನಂದಕುಮಾರ ಜಮಗಿಕರ್, ಸಂಜುಕುಮಾರ ಸಿರ್ಸೆ, ರವೀಂದ್ರ ಬಾಲೆಬಾಯಿ, ಮಹೇಶ ಕೋಲಿ, ಸತೀಶ ಅಲಿಯಂಬರ್, ಚಂದ್ರಕಾಂತ ಹಳ್ಳಿಖಖೇಡಕರ್, ಶರಣಪ್ಪ ಶಾಶೆಂಪೂರ, ರವೀಂದ್ರ ಗುಮಾಸ್ತಿ ಹಾಗೂ ಸುರೇಶ ಅವರು ಈ ವೇಳೆ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು