ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ | ಜಿಲ್ಲೆಯಲ್ಲಿ ಒಂದೇ ದಿನ 10 ಮಂದಿಗೆ ಸೋಂಕು

ಮನೆಯಿಂದ ಹೊರಗೆ ಹೋಗದಿದ್ದರೂ ವ್ಯಕ್ತಿಗೆ ತಗುಲಿದ ವೈರಾಣು
Last Updated 20 ಮೇ 2020, 13:43 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ ಮತ್ತೆ ಐವರು ಹೆಣ್ಣುಮಕ್ಕಳು ಸೇರಿ 10 ಜನರಿಗೆ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 68ಕ್ಕೆ ಏರಿದೆ. ನಗರದ ಓಲ್ಡ್‌ಸಿಟಿಯ ಏಳು, ಚಿಟಗುಪ್ಪದ ಇಬ್ಬರು ಹಾಗೂ ಭಾಲ್ಕಿ ತಾಲ್ಲೂಕಿನ ಚಳಕಾಪುರದ ಒಬ್ಬರಿಗೆ ಸೋಂಕು ತಗುಲಿದೆ.

ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಓಲ್ಡ್‌ಸಿಟಿಯ ಗೋಲೆಖಾನಾ ಹಾಗೂ ಮನಿಯಾರ್‌ ತಾಲೀಂನ ಏಳು ಜನರನ್ನು ನಗರದ ಹೊರವಲಯದಲ್ಲಿರುವ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು, ವೈದ್ಯಕೀಯ ಪರೀಕ್ಷೆ ನಡೆಸಿದಾಗ ಅವರಿಗೆ ಸೋಂಕು ತಗುಲಿರುವುದು ಕಂಡು ಬಂದಿದೆ.

ಓಲ್ಡ್‌ಸಿಟಿಯ 72, 45, 18 ವರ್ಷದ ಪುರುಷ, 40 ವರ್ಷದ ಮಹಿಳೆ, 12, 9 ವರ್ಷದ ಬಾಲಕಿಯರು ಹಾಗೂ 15 ವರ್ಷದ ಬಾಲಕನಿಗೆ ಸೋಂಕು ತಗುಲಿದೆ.

ಈಗಾಗಲೇ ಜಿಲ್ಲೆಯ ಇಬ್ಬರು ಕೋವಿಡ್‌–19 ಸೋಂಕಿನಿಂದ ಮೃತಪಟ್ಟಿದ್ದಾರೆ. 44 ಪ್ರಕರಣಗಳು ಸಕ್ರಿಯವಾಗಿವೆ. ವಿಶೇಷ ನಿಗಾ ಘಟಕದಲ್ಲಿದ್ದ 21 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಸೋಂಕಿತರನ್ನು ಪತ್ತೆ ಹಚ್ಚುವ ಹಾಗೂ ಪ್ರತ್ಯೇಕಿಸುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ.

ಕಳೆದ ವಾರ ಓಲ್ಡ್‌ಸಿಟಿಯ ಒಂದೇ ಓಣಿಯಲ್ಲಿ 13 ಹಾಗೂ ಒಂದೇ ಪ್ರದೇಶದಲ್ಲಿ 23 ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ಏಕಕಾಲದಲ್ಲಿ 10 ಜನರಿಗೆ ಸೋಂಕು ತಗುಲಿರುವುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT