ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ

Last Updated 9 ಜುಲೈ 2021, 12:23 IST
ಅಕ್ಷರ ಗಾತ್ರ

ಬೀದರ್: ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಬೀದರ್ ಹಾಗೂ ಔರಾದ್ ತಾಲ್ಲೂಕುಗಳ 10 ಬಡ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ನೀಡಿದೆ.‌

ನಗರದ ಐ.ಎಂ.ಎ ಹಾಲ್‍ನಲ್ಲಿ ಕ್ಲಬ್ ವತಿಯಿಂದ ಆಯೋಜಿಸಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. 34 ವೈದ್ಯರನ್ನು ಸನ್ಮಾನಿಸಲಾಯಿತು.

ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಅಧ್ಯಕ್ಷ ಡಾ. ನಿತೇಶಕುಮಾರ ಬಿರಾದಾರ ಮಾತನಾಡಿ, ಬಡ ಮಹಿಳೆಯರಿಗೆ ನೆರವಾಗಲು ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ. ಮಹಿಳೆಯರು ಹೊಲಿಗೆ ಹಾಗೂ ಇತರ ಕಾಯಕಗಳ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ಕೋವಿಡ್ ಇಡೀ ಜಗತ್ತನ್ನೇ ಕಾಡುತ್ತಿದೆ. ಸೋಂಕಿನಿಂದ ಜನರ ಜೀವ ಉಳಿಸಲು ಹಗಲಿರುಳು ಶ್ರಮಿಸುತ್ತಿರುವ ವೈದ್ಯರ ಸೇವೆ ಶ್ಲಾಘನೀಯವಾಗಿದೆ ಎಂದು ನುಡಿದರು.

ಹಿರಿಯ ವೈದ್ಯ ಡಾ. ಸುಭಾಷ ಕರ್ಪೂರ ಮಾತನಾಡಿ, ವೃತ್ತಿ ಯಾವುದೇ ಆಗಿದ್ದರೂ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು. ವೈದ್ಯ ವೃತ್ತಿ ಶ್ರೇಷ್ಠವಾಗಿದೆ. ವೈದ್ಯರು ವೃತ್ತಿ ಘನತೆ, ಗೌರವಗಳನ್ನು ಕಾಪಾಡಿಕೊಂಡು ಹೋಗಬೇಕು ಎಂದು ಸಲಹೆ ಮಾಡಿದರು.

ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ. ಹತ್ತು ಹಲವು ಜನೋಪಯೋಗಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಐ.ಎಂ.ಎ ಬೀದರ್ ಶಾಖೆ ಅಧ್ಯಕ್ಷ ಡಾ. ವಿ.ವಿ. ನಾಗರಾಜ ಹೇಳಿದರು.

ಕ್ಲಬ್ ಉಪಾಧ್ಯಕ್ಷ ಡಾ. ಕಪಿಲ್ ಪಾಟೀಲ, ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ರಘು ಕೃಷ್ಣಮೂರ್ತಿ, ಖಜಾಂಚಿ ಕಾಮಶೆಟ್ಟಿ ಚಿಕ್ಕಬಸೆ, ನಿಕಟಪೂರ್ವ ಅಧ್ಯಕ್ಷ ಸೂರ್ಯಕಾಂತ ರಾಮಶೆಟ್ಟಿ, ಡಾ. ಆರತಿ ರಘು, ನಿತಿನ್ ಕರ್ಪೂರ, ಸತೀಶ್ ಸ್ವಾಮಿ, ಶಿವಕುಮಾರ ಪಾಖಲ್, ರಾಜಕುಮಾರ ಅಳ್ಳೆ ಉಪಸ್ಥಿತರಿದ್ದರು.

ಚೇತನ ಮೇಗೂರ ನಿರೂಪಿಸಿದರು. ಕ್ಲಬ್ ಕಾರ್ಯದರ್ಶಿ ಸುಧೀಂದ್ರ ಸಿಂದೋಲ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT