ಕಳ್ಳತನವಾಗಿದ್ದ 10 ಬೈಕ್‌ಗಳ ವಶ

ಹುಮನಾಬಾದ್: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳತನವಾಗಿದ್ದ 10 ದ್ವಿಚಕ್ರ ವಾಹನ ಹಾಗೂ ಆರೋಪಿ ಶಿವಪ್ರಸಾದ್ ಅರ್ಜುನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
‘ಮಾಣಿಕ್ ನಗರ ಕ್ರಾಸ್ ಹತ್ತಿರದಲ್ಲಿ ಸೋಮವಾರ ಬೆಳಿಗ್ಗೆ ಆರೋಪಿಯು ನಂಬರ್ ಪ್ಲೇಟ್ ಇಲ್ಲದೆ ಇರುವ ಹೊಂಡಾ ಶೈನ್ ಬೈಕ್ ಮೇಲೆ ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರಿಗೆ ಅನುಮಾನ ಬಂದು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿಯವರೆಗೆ ಒಟ್ಟು 10 ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದು, ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಇಟ್ಟಿರುವುದಾಗಿ ತಿಳಿಸಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿ ₹ 5 ಲಕ್ಷ ಮೌಲ್ಯದ 10 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಪಿಐ ಶರಣಬಸಪ್ಪ ಕೊಡ್ಲಾ ತಿಳಿಸಿದ್ದಾರೆ.
ಎಎಸ್‌ಪಿ ಶಿವಾಂಶು ರಜಪೂತ್, ಪಿಎಸ್ಐ ಮಂಜನಗೌಡ ಪಾಟೀಲ, ಅಪರಾಧ ವಿಭಾಗದ ಪಿಎಸ್ಐ ಸುರೇಶ ಹಜ್ಜರ್ಗಿ, ಸಿಬ್ಬಂದಿ ಸೂರ್ಯಕಾಂತ, ಬಾಬುರಾಯ, ಶೀಲಸಾಗರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.