ಬೀದರ್: ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಕ್ಲಬ್ ಬೀದರ್ ಸಹಯೋಗದಲ್ಲಿ ಇಲ್ಲಿಯ ಸಾಯಿ ಕಾಲೊನಿಯಲ್ಲಿ ನಡೆದ ಲಸಿಕಾಕರಣ ಕಾರ್ಯಕ್ರಮದಲ್ಲಿ 106 ಜನ ಕೋವಿಡ್ ಲಸಿಕೆ ಪಡೆದರು.
ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಕೋವಿಡ್ ಲಸಿಕೆಯ ಮೊದಲ ಹಾಗೂ ಎರಡನೇ ಡೋಸ್ ತೆಗೆದುಕೊಂಡರು.
ರೋಟರಿ ಕ್ಲಬ್ ಬೀದರ್ ಅಧ್ಯಕ್ಷ ಪ್ರಕಾಶ ಟೊಣ್ಣೆ ಮಾತನಾಡಿ, ಮಹಾಮಾರಿ ಕೋವಿಡ್ ತಡೆಗೆ ಲಸಿಕೆಯೊಂದೇ ರಾಮಬಾಣವಾಗಿದೆ ಎಂದು ಹೇಳಿದರು.
ಲಸಿಕೆ ಬಗ್ಗೆ ಯಾವುದೇ ಭಯ, ಆತಂಕ ಬೇಡ. ಸಂಪೂರ್ಣ ಸುರಕ್ಷಿತವಾಗಿರುವ ಕಾರಣ ಅರ್ಹ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.
ಕೋವಿಡ್ ಮೊದಲ ಹಾಗೂ ಎರಡನೇ ಅಲೆಗಳು ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿವೆ. ಇದೀಗ ಮೂರನೇ ಅಲೆ ಮುನ್ಸೂಚನೆ ಇದೆ. ಅದನ್ನು ಸಮರ್ಥವಾಗಿ ಎದುರಿಸಲು ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಲಸಿಕೆ ಪಡೆಯಲು ಮುಂದೆ ಬರಬೇಕು ಎಂದು ಹೇಳಿದರು.
ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಂಡಿವೆ. ಆದರೆ, ಸರ್ಕಾರಗಳೊಂದಿಗೆ ಸಾರ್ವಜನಿಕರೂ ಕೈಜೋಡಿಸಿದಾಗ ಮಾತ್ರ ಸೋಂಕನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.
ಶ್ರೀ ಮಾರ್ಕೇಟಿಂಗ್ ಮಾಲೀಕ ಶಿವಕುಮಾರ ಪಾಟೀಲ, ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಕಾರ್ಯದರ್ಶಿ ಶಿವಶಂಕರ ಕಾಮಶೆಟ್ಟಿ, ಕ್ಲಬ್ ಕಾರ್ಯದರ್ಶಿ ಅನಿಲಕುಮಾರ ಔರಾದೆ, ಸದಸ್ಯರಾದ ಅಮರ ಡೊಳ್ಳಿ, ರಂಜೀತ್ ಪಾಟೀಲ, ಗೋಪಾಲ್ ಲೋಯ, ವಸಂತ ಪಾಟೀಲ, ದತ್ತು ಪಾಟೀಲ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.