ಭಾನುವಾರ, ಜನವರಿ 16, 2022
28 °C

ಬೀದರ್‌: ಗಡಿಯಲ್ಲಿ 11 ಚೆಕ್‌ಪೋಸ್ಟ್‌ ಸ್ಥಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಕೋವಿಡ್‌ ಮೂರನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಹಾಗೂ ತೆಲಂಗಾಣ ಗಡಿಯಲ್ಲಿ ಜಿಲ್ಲಾಡಳಿತ 11 ಚೆಕ್‌ಪೋಸ್ಟ್‌ಗಳನ್ನು ತೆರೆದಿದೆ.

ತೆಲಂಗಾಣ ಗಡಿಯಲ್ಲಿ ನಾಲ್ಕು ಹಾಗೂ ಮಹಾರಾಷ್ಟ್ರದ ಗಡಿಯಲ್ಲಿ ಏಳು ಚೆಕ್‌ಪೋಸ್ಟ್‌ಗಳನ್ನು ತೆರೆದು ನೆರೆಯ ರಾಜ್ಯದಿಂದ ಬರುತ್ತಿರುವ ಪ್ರಯಾಣಿಕರ ತಪಾಸಣೆ ತೀವ್ರಗೊಳಿಸಲಾಗಿದೆ. ಕೋವಿಡ್‌ ಎರಡೂ ಲಸಿಕೆ ಪಡೆದವರಿಗೆ ಮಾತ್ರ ಜಿಲ್ಲೆಯ ಗಡಿಯೊಳಗೆ ಪ್ರವೇಶ ನೀಡಲಾಗುತ್ತಿದೆ.

‘ಕೋವಿಡ್‌ ಲಸಿಕೆ ಪಡೆದ ಪ್ರಮಾಣಪತ್ರ ಇರುವ ಹಾಗೂ 74 ಗಂಟೆ ಒಳಗೆ ಆರ್‌ಟಿಪಿಸಿಆರ್‌ ಮಾಡಿಸಿಕೊಂಡವರಿಗೆ ಮಾತ್ರ ಜಿಲ್ಲೆಯೊಳಗೆ ಪ್ರವೇಶ ನೀಡಲಾಗುತ್ತಿದೆ. ಪ್ರಮಾಣಪತ್ರ ಇಲ್ಲದಿದ್ದರೆ ಮುಲಾಜಿಲ್ಲದೆ ವಾಪಸ್‌ ಕಳಿಸಲಾಗುತ್ತಿದೆ’ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೃಷ್ಣಾ.ರೆಡ್ಡಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಪ್ರಮಾಣ ಶೂನ್ಯಕ್ಕೆ ಇಳಿದ ನಂತರ ತೆಲಂಗಾಣ ಗಡಿಯಲ್ಲಿನ ಚೆಕ್‌ಪೋಸ್ಟ್‌ ಬಂದ್‌ ಮಾಡಲಾಗಿತ್ತು. ಮಹಾರಾಷ್ಟ್ರದ ಗಡಿಯಲ್ಲಿನ ಕೆಲ ಚೆಕ್‌ಪೋಸ್ಷ್‌ಗಳನ್ನು ಸಹ ಮುಚ್ಚಲಾಗಿತ್ತು. ಶನಿವಾರದಿಂದ ಮತ್ತೆ ಎಲ್ಲ ಚೆಕ್‌ಪೋಸ್ಟ್‌ ಆರಂಭಿಸಿ ತಪಾಸಣೆ ಬಿಗಿಗೊಳಿಸಲಾಗಿದೆ. ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.