ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: 145 ಕೆ.ಜಿ. ಗಾಂಜಾ ವಶ

Last Updated 4 ಸೆಪ್ಟೆಂಬರ್ 2020, 14:35 IST
ಅಕ್ಷರ ಗಾತ್ರ

ಬೀದರ್: ಡ್ರಗ್‌ ಮಾಫಿಯಾ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ಸಂದರ್ಭದಲ್ಲೇ ಜಿಲ್ಲೆಯ ಪೊಲೀಸರು ₹2.90 ಲಕ್ಷ ಮೌಲ್ಯದ 145 ಕೆ.ಜಿ. ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಹುಮನಾಬಾದ್‌ ತಾಲ್ಲೂಕಿನ ದುಬಲಗುಂಡಿ ಗ್ರಾಮದ ಕಬ್ಬಿನ ಹೊಲದಲ್ಲಿ ಬೆಳೆದಿದ್ದ ₹2.90 ಲಕ್ಷ ಮೌಲ್ಯದ 145 ಕೆ.ಜಿ. ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿರುವ ಹಳ್ಳಿಖೇಡ ಪೊಲೀಸರು ಆರೋಪಿ ಮಾಣಿಕ ಗುಂಡಪ್ಪ ಜಾಂತೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಆರೋಪಿ ಮಾರಾಟ ಮಾಡುವ ಉದ್ದೇಶದಿಂದ ಕಬ್ಬಿನ ತೋಟದಲ್ಲಿ 32 ಗಿಡಗಳನ್ನು ಬೆಳೆಸಿದ್ದರು. ಖಚಿತ ಮಾಹಿತಿ ದೊರೆತ ತಕ್ಷಣ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಗಾಂಜಾ ಎಲ್ಲಿ ಮಾರಾಟ ಮಾಡುತ್ತಿದ್ದ ಹಾಗೂ ಯಾರೊಂದಿಗೆ ಸಂಪರ್ಕ ಹೊಂದಿದ್ದಾನೆ ಎನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌.ನಾಗೇಶ ತಿಳಿಸಿದ್ದಾರೆ.

ಹುಮನಾಬಾದ್‌ ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಹಳ್ಳಿಖೇಡ ಪಿಎಸ್‌ಐ ಮಹಾಂತೇಶ ಲುಂಬಿ ಹಾಗೂ ಹುಮನಾಬಾದ್‌ ತಹಶೀಲ್ದಾರ್ ನಾಗಯ್ಯ ಹಿರೇಮಠ ಹಾಗೂ ಪೊಲೀಸ್‌ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT