ಬೀದರ್: ಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಲಾ ಐದರಂತೆ ಗೋಂಧಳಿ ಸಮಾಜಕ್ಕೆ ಒಟ್ಟು 15 ಟಿಕೆಟ್ ನೀಡಬೇಕು ಎಂದು ಅಖಿಲ ಭಾರತ ಗೋಂಧಳಿ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಡಾ. ಸಿದ್ರಾಮ ವಾಘಮಾರೆ ಒತ್ತಾಯಿಸಿದರು.
ಕುಷ್ಟಗಿ ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್ ಸಮಾಜದ ಅಭ್ಯರ್ಥಿಗೆ ಟಿಕೆಟ್ ಘೋಷಿಸಿದೆ. ರಾಜಕೀಯ ಪಕ್ಷಗಳು ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬೀದರ್ ಜಿಲ್ಲೆಯಲ್ಲೂ ಟಿಕೆಟ್‍ನಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಬೇಡಿಕೆ ಮಂಡಿಸಿದರು.
ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮಾಜದ ಅಭಿವೃದ್ಧಿಗೆ ಸರ್ಕಾರಗಳು ಆದ್ಯತೆ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸಮಾಜದ ಪ್ರಗತಿಗೆ ₹5 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದರು.
ಸಮಾಜದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸಚಿನ್ ನವಲಕೇರೆ, ರಾಜು ವರ್ಧನ್ ಗರುಡಕರ್, ಅಮೂಲ್ ಗರುಡಕರ್, ಬಾಲಾಜಿ ಕಾಟೆ, ರವಿ ಪಾಠಕ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.