ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ-ಮೆಗಾ ಲೋಕ್ ಅದಾಲತ್‌ನಲ್ಲಿ 1655 ಪ್ರಕರಣಗಳು ಇತ್ಯರ್ಥ

Last Updated 19 ಸೆಪ್ಟೆಂಬರ್ 2020, 15:55 IST
ಅಕ್ಷರ ಗಾತ್ರ

ಬೀದರ್‌: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸೆ.19ರಂದು ಇ-ಮೆಗಾ ಲೋಕ್ ಅದಾಲತ್ ನಡೆಯಿತು.

ಇದರಲ್ಲಿ ಒಟ್ಟು 293 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ 3663 ಪ್ರಕರಣಗಳನ್ನು ರಾಜಿ ಸಂದಾನಕ್ಕಾಗಿ ಗುರುತಿಸಲಾಗಿತ್ತು.

ಈ ಪೈಕಿ 281 ವ್ಯಾಜ್ಯಪೂರ್ವ ಮತ್ತು 1374 ಬಾಕಿ ಪ್ರಕರಣಗಳು ಸೇರಿ ಒಟ್ಟು 1655 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕಾಡಲೂರ ಸತ್ಯನಾರಾಯಾಣಾಚಾರ್ಯ ಮಾರ್ಗದರ್ಶನದಲ್ಲಿ ಇ- ಮೆಗಾ ಲೋಕ್ ಅದಾಲತ್ ನಡೆಸಲಾಯಿತು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಸಿದ್ರಾಮ ಟಿ.ಪಿ. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT