ಗುರುವಾರ , ಜೂಲೈ 2, 2020
27 °C
ಕೋವಿಡ್‌ ವೈರಾಣು ಪೀಡಿತರ ಸಂಖ್ಯೆ 607ಕ್ಕೆ ಏರಿಕೆ

ಬೀದರ್‌ | ಮತ್ತೆ 17 ಜನರಿಗೆ ಕೋವಿಡ್‌ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani
ಬೀದರ್: ಜಿಲ್ಲೆಯಲ್ಲಿ ಚಿಟಗುಪ್ಪದ 14 ಹಾಗೂ ಬೀದರ್‌ನ 3 ಜನ ಸೇರಿ ಮತ್ತೆ 17 ಜನರಿಗೆ ಕೋವಿಡ್‌ –19 ದೃಢಪಟ್ಟಿದೆ. ಈ ಮೂಲಕ ಸೋಂಕು ಪೀಡಿತರ ಸಂಖ್ಯೆ 607ಕ್ಕೆ ತಲುಪಿದೆ.

ಚಿಟಗುಪ್ಪದ ಇಬ್ಬರು ಬಾಲಕಿಯರು ಸೇರಿ ಐವರು ಮಹಿಳೆಯರು, ಏಳು ಪುರುಷರು ಹಾಗೂ ಬೀದರ್‌ನ ಮೂವರು ಪುರುಷರಿಗೆ ಕೋವಿಡ್ –19 ತಗುಲಿದೆ.

ಜಿಲ್ಲೆಯಲ್ಲಿ ಈವರೆಗೆ 19 ಜನ ಕೋವಿಡ್ –19 ನಿಂದ ಮೃತಪಟ್ಟಿದ್ದಾರೆ. ಬ್ರಿಮ್ಸ್‌ನ ವಿಶೇಷ ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆದ 477 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 192 ಕಂಟೇನ್ಮೆಂಟ್‌ ಪ್ರದೇಶಗಳ ಪೈಕಿ 153 ಸಕ್ರಿಯವಾಗಿವೆ.

ಆಸ್ಪತ್ರೆಯ ನೋಂದಣಿ ಅಮಾನತು:  ಕೋವಿಡ್– 19 ನಿಯಂತ್ರಣದಲ್ಲಿ ಎಸ್‌ಒಪಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಬಸವಕಲ್ಯಾಣದ ಖಾಸಗಿ ಆಸ್ಪತ್ರೆಯೊಂದರ ನೋಂದಣಿ ಅಮಾನತು ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಹಲ್ಲೆ ನಡೆಸಿದವರ ವಿರುದ್ಧ ಕ್ರಮ: ಕೋವಿಡ್‌ –19 ಜಿಲ್ಲಾ ನೋಡಲ್ ಅಧಿಕಾರಿಯಾದ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಗೋವಿಂದ ಬಿ. ಅವರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ರಾಮಚಂದ್ರನ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌.ನಾಗೇಶ ಅವರಿಗೆ ನಿರ್ದೇಶನ ನೀಡಿದ್ದಾರೆ.

‘ಸಮುದಾಯದ ಆರೋಗ್ಯ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಕೊರೊನಾ ವಾರಿಯರ್‌ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ. ಇದು ನೇರವಾಗಿ ಜಿಲ್ಲಾಡಳಿತದ ಮೇಲೆ ನಡೆಸಿದ ಹಲ್ಲೆಯಾಗಿದೆ. ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು