ಶುಕ್ರವಾರ, ಜುಲೈ 30, 2021
27 °C

ಸಮಾಜ ವಿಜ್ಞಾನ ಪರೀಕ್ಷೆಗೆ 1727 ವಿದ್ಯಾರ್ಥಿಗಳು ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯ 99 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆ ಸುಗಮವಾಗಿ ನಡೆಯಿತು. ನೋಂದಣಿ ಮಾಡಿಕೊಂಡಿದ್ದ 2,5046 ವಿದ್ಯಾರ್ಥಿಗಳ ಪೈಕಿ 23,319 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 1727 ವಿದ್ಯಾರ್ಥಿಗಳು ಗೈರಾಗಿದ್ದರು.

ಕಂಟೇನ್ಮೆಂಟ್ ಪ್ರದೇಶದ 74 ವಿದ್ಯಾರ್ಥಿಗಳು ಹಾಜರಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ 22 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ತಿಳಿಸಿದ್ದಾರೆ.

ನೆರೆಯ ರಾಜ್ಯಗಳ 71 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 16 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆದರು. 55 ವಿದ್ಯಾರ್ಥಿಗಳು ಗೈರಾದರು.

ಹೆಸರು ನೋಂದಾಯಿಸಿಕೊಂಡಿದ್ದ 455 ವಲಸೆ ವಿದ್ಯಾರ್ಥಿಗಳ ಪೈಕಿ 437 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 18 ವಿದ್ಯಾರ್ಥಿಗಳು ಪರೀಕ್ಷೆಗೆ ಬಂದಿರಲಿಲ್ಲ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು