ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ನಲ್ಲಿ 18 ಅಡಿ ಎತ್ತರದ ಪಟೇಲ್ ಪ್ರತಿಮೆ

ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಷ್ಠಾನ ಅಧ್ಯಕ್ಷ ಶಿವಶರಣಪ್ಪ ವಾಲಿ ಹೇಳಿಕೆ
Last Updated 31 ಅಕ್ಟೋಬರ್ 2020, 13:56 IST
ಅಕ್ಷರ ಗಾತ್ರ

ಬೀದರ್: ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 18 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲಾಗುತ್ತಿದೆ ಎಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಷ್ಠಾನದ ಅಧ್ಯಕ್ಷ ಶಿವಶರಣಪ್ಪ ವಾಲಿ ಹೇಳಿದರು.

ಪ್ರತಿಮೆ ಸ್ಥಾಪನೆಯಾಗಲಿರುವ ನಗರದ ಬರೀದ್‍ಶಾಹಿ ಉದ್ಯಾನದ ಎದುರಿರುವ ನಿಯೋಜಿತ ಸ್ಥಳದಲ್ಲಿ ಶನಿವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 146ನೇ ಜಯಂತಿ ನಿಮಿತ್ತ ಆಯೋಜಿಸಿದ್ದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಗರದಲ್ಲಿ ಸರ್ದಾರ್ ಪಟೇಲ್ ಅವರ ಪ್ರತಿಮೆ ಸ್ಥಾಪನೆಗಾಗಿ ಎರಡು ದಶಕಗಳಿಂದ ಯತ್ನಿಸಲಾಗುತ್ತಿದೆ. 21 ವರ್ಷಗಳ ಹೋರಾಟದ ನಂತರ ಪ್ರತಿಮೆ ಸ್ಥಾಪನೆಗೆ ಸ್ಥಳ ಸಿಕ್ಕಿದೆ. 18 ಅಡಿ ಎತ್ತರದ ಕಂಚಿನ ಪ್ರತಿಮೆ ಈಗಾಗಲೇ ಸಿದ್ಧವಾಗಿದೆ ಎಂದು ತಿಳಿಸಿದರು.

ಪ್ರತಿಮೆ ಸ್ಥಾಪನೆ, ವೃತ್ತ ಹಾಗೂ ಉದ್ಯಾನ ನಿರ್ಮಾಣಕ್ಕೆ ₹ 3 ಕೋಟಿ ವೆಚ್ಚವಾಗುವ ಅಂದಾಜು ಇದೆ. ಜನಪ್ರತಿನಿಧಿಗಳು, ಗಣ್ಯರು, ಸಾರ್ವಜನಿಕರು ಈ ಕಾರ್ಯಕ್ಕೆ ಸಹಕಾರ ನೀಡುವ ಅಗತ್ಯವಿದೆ ಎಂದು ಹೇಳಿದರು.

ದೇಶದ ಅಖಂಡತೆಗೆ ಸರ್ದಾರ್ ಪಟೇಲ್ ಕೊಡುಗೆ ಅನನ್ಯ. ಅವರು ದಿಟ್ಟ ನಿರ್ಧಾರ ಕೈಗೊಳ್ಳದಿದ್ದರೆ ಕಲ್ಯಾಣ ಕರ್ನಾಟಕದ ಚಿತ್ರಣವೇ ಬೇರೆಯಾಗುತಿತ್ತು. ಈ ಭಾಗದ ಜನ ಪಟೇಲರನ್ನು ಸದಾ ಸ್ಮರಿಸಬೇಕು ಎಂದರು.

ಸಂಸದ ಭಗವಂತ ಖೂಬಾ ಮಾತನಾಡಿ, ಭಾರತವನ್ನು ಒಗ್ಗೂಡಿಸಿದ ಕೀರ್ತಿ ಸರ್ದಾರ್ ವಲ್ಲಭಭಾಯಿ ಪಟೇಲ್‍ರಿಗೆ ಸಲ್ಲುತ್ತದೆ ಎಂದು ಹೇಳಿದರು.

ನಗರದಲ್ಲಿ ಮುಂದಿನ ದಿನಗಳಲ್ಲಿ ಕಂಚಿನ ಪ್ರತಿಮೆ ಸ್ಥಾಪನೆಗೊಳ್ಳಲಿದೆ. ಈ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿ, ಸ್ಥಳದ ಸಮಸ್ಯೆ ಕೊನೆಗೊಂಡಿರುವುದು ಸಮಾಧಾನದ ವಿಷಯ. ಸಾಧ್ಯವಾದಷ್ಟು ಬೇಗ ಮೂರ್ತಿ ಸ್ಥಾಪನೆ ಆಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಲಾಯಿತು.

ಶಕುಂತಲಾ ವಾಲಿ, ಜಿಲ್ಲಾ ಪಂಚಾಯಿತಿ ಸದಸ್ಯ ವಿಜಯಕುಮಾರ ಪಾಟೀಲ ಗಾದಗಿ, ಶಕುಂತಲಾ ಬೆಲ್ದಾಳೆ, ಡಾ. ರಜನೀಶ ವಾಲಿ, ದೀಪಕ್ ವಾಲಿ, ಆದೀಶ್ ವಾಲಿ, ಕರ್ನಲ್ ಶರಣಪ್ಪ ಸಿಕೇನಪುರ, ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ, ಡಾ. ಜಗನ್ನಾಥ ಹೆಬ್ಬಾಳೆ, ರೇವಣಸಿದ್ದಪ್ಪ ಜಲಾದೆ, ಅನಿಲಕುಮಾರ ಬೆಲ್ದಾರ್, ಶ್ರೀಮಂತ ಸಪಾಟೆ, ವಿರೂಪಾಕ್ಷ ಗಾದಗಿ ಇದ್ದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಷ್ಠಾನ, ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸರ್ವೋದಯ ನ್ಯಾಸ್, ಭಾರತ ಸೇವಾ ದಳ, ನಗರಸಭೆ ಮತ್ತು ಭಾರತ ಸಂರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT