ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆ ಅಧಿವೇಶನ: ಕನ್ನಡದಲ್ಲಿ ಸಾಗರ್‌ ಖಂಡ್ರೆ ಪ್ರಮಾಣ

Published 24 ಜೂನ್ 2024, 16:04 IST
Last Updated 24 ಜೂನ್ 2024, 16:04 IST
ಅಕ್ಷರ ಗಾತ್ರ

ಬೀದರ್‌: ಬೀದರ್‌ ಲೋಕಸಭಾ ಕ್ಷೇತ್ರದ ಸಂಸದರಾಗಿ ಸಾಗರ್‌ ಖಂಡ್ರೆಯವರು ನವದೆಹಲಿಯ ಸಂಸತ್‌ ಭವನದಲ್ಲಿ ಸೋಮವಾರ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

18ನೇ ಲೋಕಸಭೆಯ ಮೊದಲ ದಿನದ ಕಲಾಪದಲ್ಲಿ ಸಾಗರ್‌ ಅವರು ಮಾತೃಭಾಷೆ ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ಗಮನ ಸೆಳೆದರು. ಇದಕ್ಕೂ ಮುನ್ನ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಲವು ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

‘ಬೀದರ್‌ ಕ್ಷೇತ್ರದ ಪ್ರತಿನಿಧಿಯಾಗಿ ಸಂಸತ್ತಿನಲ್ಲಿ ಪ್ರಮಾಣ ಸ್ವೀಕರಿಸಿದ್ದೇನೆ. ಈ ಅದ್ಬುತ, ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾದ ಬೀದರ್‌ ಲೋಕಸಭಾ ಕ್ಷೇತ್ರದ ಮತದಾರ ಪ್ರಭುಗಳಿಗೆ ಅನಂತ ಧನ್ಯವಾದ ಸಲ್ಲಿಸುತ್ತೇನೆ. ಜನರ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರ, ರಾಜ್ಯ ಹಾಗೂ ದೇಶದ ಏಳಿಗೆಗೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತೇನೆ’ ಎಂದು ಸಾಗರ್‌ ಖಂಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT