2,500 ವೈದ್ಯರ ನೇಮಕ: ಡಾ. ಸುಧಾಕರ
ಬೀದರ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 2,500 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ ತಿಳಿಸಿದರು.
ನಗರದಲ್ಲಿ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆ 15 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಬಳಿಕ ವೈದ್ಯರ ಕೊರತೆ ನೀಗಲಿದೆ ಎಂದು ಹೇಳಿದರು.
ಸದ್ಯ ಖಾಸಗಿ ಆಸ್ಪತ್ರೆಗಳು ಬಡವರಿಗೆ ಹೆರಿಗೆಗೆ ತುಟ್ಟಿಯಾಗಿ ಪರಿಣಮಿಸಿವೆ. ತಜ್ಞ ವೈದ್ಯರನ್ನು ಒಳಗೊಂಡಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬಡವರಿಗೆ ಪೂರಕವಾಗಿದೆ ಎಂದು ಹೇಳಿದರು.
ಆರೋಗ್ಯ ಕರ್ನಾಟಕ ನಿರ್ಮಾಣ ಮಾಡುವ ದಿಸೆಯಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಬೀದರ್ ಜಿಲ್ಲೆಯಲ್ಲಿ ಅನೇಕ ಯೋಜನೆಗಳ ಮೂಲಕ ಆರೋಗ್ಯ ಇಲಾಖೆಗೆ ಹೊಸ ಕಾಯಕಲ್ಪ ಕೊಡಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.