ಸೋಮವಾರ, ಡಿಸೆಂಬರ್ 9, 2019
17 °C

‘ಕನ್ನಡ ಭವನಕ್ಕೆ ₹2 ಕೋಟಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬೀದರ್‌ನ ಚಿಕ್ಕಪೇಟೆ ಬಳಿಯ ಒಂದು ಎಕರೆ ನಿವೇಶನದಲ್ಲಿ ಕನ್ನಡ ಭವನ ನಿರ್ಮಿಸಲು ರಾಜ್ಯ ಸರ್ಕಾರ ₹ 2 ಕೋಟಿ ಮಂಜೂರು ಮಾಡಿದೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರ ಮನವಿಗೆ ಸ್ಪಂದಿಸಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ನೀಡಿದ ಆದೇಶದ ಮೇರೆಗೆ ಅನುದಾನ ಮಂಜೂರು ಮಾಡಲಾಗಿದೆ.

ಬೀದರ್‌ನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ₹ 2 ಕೋಟಿ ಮಂಜೂರು ಮಾಡಲಾಗಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಮೊದಲ ಕಂತಿನಲ್ಲಿ ಜಿಲ್ಲಾಧಿಕಾರಿಗೆ ₹1 ಕೋಟಿ ಬಿಡುಗಡೆ ಮಾಡಲು ಆದೇಶಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ (ಕನ್ನಡ ಆಡಳಿತ)  ಅಧೀನ ಕಾರ್ಯದರ್ಶಿ ಎಚ್.ಕೆ. ಸುರೇಶಬಾಬು ತಿಳಿಸಿದ್ದಾರೆ.

ಸ್ಪಂದನೆ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರು ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಕನ್ನಡ ಭವನಕ್ಕೆ ₹ 6 ಕೋಟಿ ಅನುದಾನ ಕೋರಿ ಮನವಿ ಸಲ್ಲಿಸಿದ್ದರು.

ಜಿಲ್ಲಾ ಕೇಂದ್ರದಲ್ಲಿ ಕನ್ನಡಪರ ಚಟುವಟಿಕೆಗಳನ್ನು ನಡೆಸಲು ಸುಸಜ್ಜಿತ ಭವನ ತೀರಾ ಅವಶ್ಯಕವಾಗಿದೆ. ಜಿಲ್ಲಾಡಳಿತ ವರ್ಷದ ಹಿಂದೆಯೇ ಒಂದು ಎಕರೆ ಜಮೀನು ಮಂಜೂರು ಮಾಡಿದೆ. ಕೂಡಲೇ ಅನುದಾನ ಒದಗಿಸಿ ಗಡಿ ಜಿಲ್ಲೆಯಲ್ಲಿ ಕನ್ನಡದ ಬೆಳವಣಿಗೆಗೆ ನೆರವಾಗಬೇಕು ಎಂದು ಮನವಿ ಮಾಡಿದ್ದರು. ಅವರ ಮನವಿ ಮೇರೆಗೆ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಅನುದಾನ ಒದಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಆದೇಶ ನೀಡಿದ್ದರು.

ಪ್ರತಿಕ್ರಿಯಿಸಿ (+)