ಸೋಮವಾರ, ಜೂಲೈ 6, 2020
24 °C

ಸಿಡಿಲು ಬಡಿದು ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಟಗುಪ್ಪ: ಪಟ್ಟಣದಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಪಟ್ಟಣದ ಪನ್ನಮಲ್ಲ ಚೌಕ್ ಹತ್ತಿರ ನಿಂತಿದ್ದಾಗ ಪಟ್ಟಣದ ನಿವಾಸಿ ನಿಜಾಮೊದ್ದೀನ್ ನಜಮೊದ್ದೀನ್ (45) ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಗಾಯಗೊಂಡ ಪಟ್ಟಣದ ನಿವಾಸಿ ವಾಜಿದ್ ಬಂದೆಲಿಸಾಬ್ (28) ಅವರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಬ್ಬ ಗಾಯಾಳು ಇಲ್ಲಿಯ ನಿವಾಸಿ ಸಂಜು ಬಾಬುರಾವ್ (38) ಅವರನ್ನು ಬೀದರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಸಕ ರಾಜಶೇಖರ ಪಾಟೀಲ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಕೊಡಿಸುವುದಾಗಿ ಭರವಸೆ ನೀಡಿದರು.

ಪುರಸಭೆ ಸದಸ್ಯ ದಿಲೀಪ ಕುಮಾರ್ ಬಗ್ದಲಕರ್ ಹಾಗೂ ಇತರರು ಇದ್ದರು. ಈ ಸಂಬಂಧ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.