ಸೋಮವಾರ, ಆಗಸ್ಟ್ 2, 2021
19 °C
ಪಶು ವೈದ್ಯಕೀಯ ಸಹಾಯಕ, ಪರೀಕ್ಷಕ ಹುದ್ದೆ

ಅರ್ಜಿ ಸಲ್ಲಿಸಲು 2 ತಿಂಗಳ ಕಾಲಾವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಕೋವಿಡ್ ಕಾರಣ ಕಲ್ಯಾಣ ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯ ಪಶು ವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇನ್ನೂ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ.

ಕೋವಿಡ್‌ನಿಂದಾಗಿ ಅನೇಕ ಅಭ್ಯರ್ಥಿಗಳಿಗೆ ಪಶುವೈದ್ಯಕೀಯ ಸಹಾಯಕ ಮತ್ತು ಪಶುವೈದ್ಯಕೀಯ ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಉದ್ಯೋಗಾಕಾಂಕ್ಷಿಗಳ ಮನವಿ ಮೇರೆಗೆ ಅರ್ಜಿ ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ಕೊಡಲಾಗಿದೆ.

ಪಶುವೈದ್ಯಕೀಯ ಸಹಾಯಕ 83 ಹುದ್ದೆಗಳು ಮತ್ತು ಪಶುವೈದ್ಯಕೀಯ ಪರೀಕ್ಷಕ 32 ಹುದ್ದೆಗಳಿಗೆ ಆಗಸ್ಟ್‌ 18ರ ವರೆಗೆ
ಕಾಲಾವಕಾಶ ನೀಡಲಾಗಿದೆ. ಒಟ್ಟು 115 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು