ಶುಕ್ರವಾರ, ಆಗಸ್ಟ್ 12, 2022
24 °C

‘ಸ್ಮಾರಕಕ್ಕೆ ₹20 ಕೋಟಿ ಅನುದಾನ ಒದಗಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಹಾಸನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕ, ವಸ್ತು ಸಂಗ್ರಹಾಲಯ ಹಾಗೂ ಸಂಶೋಧನಾ ಕೇಂದ್ರ ಸ್ಥಾಪನೆಗೆ ₹20 ಕೋಟಿ ಅನುದಾನ ಒದಗಿಸಬೇಕು ಎಂದು ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿ ಆಗ್ರಹಿಸಿದೆ.

ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ, ಜಿಲ್ಲಾ ಘಟಕದ ಅಧ್ಯಕ್ಷ ಕೀರ್ತಿರತ್ನ ಸೋನಾಲೆ, ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಸಂದೀಪ್ ಕಾಂಟೆ, ಕರ್ನಾಟಕ ಸ್ವಾಭಿಮಾನಿ ಭೋವಿ ವಡ್ಡರ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಸಂತೋಷ ಏಣಕೂರೆ ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಕಳೆದ ಬಜೆಟ್‍ನಲ್ಲಿ ಘೋಷಿಸಿರುವ ₹ 1 ಕೋಟಿ ಈ ಕಾರ್ಯಕ್ಕೆ ಸಾಕಾಗುವುದಿಲ್ಲ. ಹೀಗಾಗಿ ₹20 ಕೋಟಿ ಅನುದಾನ ಕಲ್ಪಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು