ಮಂಗಳವಾರ, ಆಗಸ್ಟ್ 3, 2021
21 °C

ಔರಾದ್: ₹20 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಔರಾದ್: ತಾಲ್ಲೂಕಿನ ಗಡಿ ಭಾಗದಲ್ಲಿ ಭಾನುವಾರ ಎರಡು ಕಡೆ ದಾಳಿ ಮಾಡಿದ ಪೊಲೀಸರು ₹ 20.5 ಲಕ್ಷ ಮೌಲ್ಯದ ಗಾಂಜಾ ವಶಪಡಿಸಿಕೊಂಡು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸೋರಳ್ಳಿ ಕ್ರಾಸ್ ಬಳಿ ಕಾರ್‌ನಲ್ಲಿ ₹17 ಲಕ್ಷ ಮೌಲ್ಯದ 170 ಕೆಜಿ ಗಾಂಜಾ ಪತ್ತೆಯಾದ ಪ್ರಕರಣ ಸಂಬಂಧ
ಆರೋಪಿಗಳಾದ ಅನಿಲ ಚವಾಣ್ ಮತ್ತು ರಾಜು ರಾಠೋಡ್ ಅವರನ್ನು ಬಂಧಿಸಲಾಗಿದೆ. ಚಿಕಲಿ ಕ್ರಾಸ್ ಬಳಿ ಆಟೊರಿಕ್ಷಾದಲ್ಲಿ ₹3.60 ಲಕ್ಷ ಮೌಲ್ಯದ 36 ಕೆ.ಜಿ ಗಾಂಜಾ ಪತ್ತೆಯಾದ ಪ್ರಕರಣ ದಲ್ಲಿ ದೇವಿದಾಸ ರಾಠೋಡ್‌, ಸಂತೋಷ ರಾಠೋಡ್‌ ಮತ್ತು ದೇವಿದಾಸ ರಾಮುಲು ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಸ್‌ಪಿ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ದೇವರಾಜ ನೇತೃತ್ವದಲ್ಲಿ ಸಿಪಿಐ ರವೀಂದ್ರನಾಥ, ಪಿಎಸ್‍ಐ ಸಿದ್ಧಲಿಂಗ ಹಾಗೂ ಔರಾದ್, ಸಂತಪುರ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಸಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು