ಸೋಮವಾರ, ಆಗಸ್ಟ್ 15, 2022
26 °C
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿಕೆ

ಕೋವಿಡ್ 3ನೇ ಅಲೆ ನಿರ್ವಹಣೆಗೆ ಕೆಕೆಆರ್‌ಡಿಬಿಯಿಂದ ₹21 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಕೋವಿಡ್-19 ಸಂಭಾವ್ಯ ಮೂರನೇ ಅಲೆಯ ನಿರ್ವಹಣೆಗೆ ಜಿಲ್ಲೆಯಲ್ಲಿ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ರೋಗಿಗಳಿಗೆ ಚಿಕಿತ್ಸೆ ಕಲ್ಪಿಸಲು ಅಗತ್ಯವಿರುವ ವೈದ್ಯಕೀಯ ಉಪಕರಣ, ಔಷಧ ಹಾಗೂ ಇತರೆ ಅಗತ್ಯ ಸಾಮಗ್ರಿಗಳ ಖರೀದಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ₹ 21 ಕೋಟಿ ಮಂಜೂರು ಮಾಡಿದೆ ಎಂದು ಪಶು ಸಂಗೋಪನೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ.

ಔರಾದ್‌ ತಾಲ್ಲೂಕಿನ ಸಂತಪುರ ತಾಲ್ಲೂಕು ಆಸ್ಪತ್ರೆಯ ಮಾದರಿಯಲ್ಲಿ ಚಿಟಗುಪ್ಪ, ಹುಲಸೂರು ಹಾಗೂ ಕಮಲನಗರ ತಾಲ್ಲೂಕು ಆಸ್ಪತ್ರೆಗಳಲ್ಲಿಯೂ 390 ಎಲ್‍ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕ ಅಳವಡಿಸುವ ಕಾಮಗಾರಿಗೆ ಮಂಜೂರಾತಿ ದೊರಕಿದೆ ಎಂದು ಹೇಳಿದ್ದಾರೆ.

ಈ ಹಿಂದೆ ರಾಜ್ಯದ ಕೆಲವೆಡೆ ಸಕಾಲಕ್ಕೆ ಆಮ್ಲಜನಕ ಸಿಲಿಂಡರ್ ಲಭಿಸದೆ ಕೆಲವರು ಮೃತಪಟ್ಟಿರುವ ಉದಾಹರಣೆಗಳು ನಮ್ಮ ಮುಂದೆ ಇವೆ. ಅಂತಹ ಘಟನೆಗಳು ಮರುಕಳಿಸದಂತಿರಲು ರೋಗಿಗಳಿಗೆ ಸಮರ್ಪಕ ಆಮ್ಲಜನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ಬೀದರ ಬ್ರಿಮ್ಸ್ ಆಸ್ಪತ್ರೆ ಆವರಣದಲ್ಲಿ ಡಿಆರ್‌ಡಿಒ ಸಹಭಾಗಿತ್ವದಲ್ಲಿ 1,000 ಎಲ್‍ಪಿಎಂ ಮತ್ತು ಕೆಎಸ್‍ಎಸ್‍ಐಡಿಸಿ ವತಿಯಿಂದ 660 ಎಲ್‍ಪಿಎಂ ಸಾಮರ್ಥ್ಯದ ಆಮ್ಲಜನಕ ಘಟಕ ನಿರ್ಮಿಸುವ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.

ಬೀದರ ಬ್ರಿಮ್ಸ್‍ನಲ್ಲಿ ಕೋವಿಡ್ ನಿರ್ವಹಣೆಗೆ ಸಿದ್ಧಪಡಿಸಲಾದ ವಾರ್ಡ್‍ಗಳಲ್ಲಿ ಅಗತ್ಯವಿರುವ 20 ವೆಂಟಿಲೇಟರ್‌ಗಳು, 450 ಆಮ್ಲಜನಕ ಸಾಂದ್ರಕ, ಆಮ್ಲಜನಕ ಸಿಲಿಂಡರ್‌ಗಳು ವಿಶೇಷವಾಗಿ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಸಲಕರಣೆಗಳ ಖರೀದಿಗೆ ಮಂಜೂರಾತಿ ಸಿಕ್ಕಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು