ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಕರ್ಯಕ್ಕೆ ₹ 25 ಕೋಟಿ ಅನುದಾನ ಕಲ್ಪಿಸಿ

ಕಂದಾಯ ಸಚಿವರಿಗೆ ಸೂರ್ಯಕಾಂತ ನಾಗಮಾರಪಳ್ಳಿ ಒತ್ತಾಯ
Last Updated 2 ನವೆಂಬರ್ 2020, 14:47 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆ ಸೇರಿದಂತೆ ಮೂಲಸೌಕರ್ಯಗಳ ತುರ್ತು ದುರಸ್ತಿ ಕಾರ್ಯಕ್ಕೆ ₹ 25.19 ಕೋಟಿ ಅನುದಾನ ಒದಗಿಸಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್‍ರಾಜ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ ಸೆಪ್ಟೆಂಬರ್ ಮೂರನೇ ವಾರದಲ್ಲಿ ಸುರಿದ ವಾಡಿಕೆಗಿಂತ ಶೇ 168 ರಷ್ಟು ಅಧಿಕ ಮಳೆಗೆ ರಸ್ತೆ, ಸೇತುವೆ, ಕೆರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲೆ, ಅಂಗನವಾಡಿ ಕಟ್ಟಡ, ವಿದ್ಯುತ್ ಕಂಬ ಸೇರಿದಂತೆ ಒಟ್ಟು ₹ 25.19 ಕೋಟಿ ಮೌಲ್ಯದ ಸಾರ್ವಜನಿಕ ಆಸ್ತಿ, ಪಾಸ್ತಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ಜಿಲ್ಲೆಯ ತಾಲ್ಲೂಕುಗಳನ್ನು ಈಗಾಗಲೇ ಅತಿವೃಷ್ಟಿ ಪೀಡಿತ ಎಂದು ಘೋಷಿಸಿ, ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯ ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ನಿರ್ದೇಶನವನ್ನೂ ನೀಡಲಾಗಿದೆ. ಮೂಲಸೌಕರ್ಯಗಳ ದುರಸ್ತಿಗೆ ಅನುದಾನ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT