ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ

25 ಕೆಜಿ ಅಕ್ರಮ ಗಾಂಜಾ ಪತ್ತೆ
Last Updated 18 ನವೆಂಬರ್ 2018, 15:58 IST
ಅಕ್ಷರ ಗಾತ್ರ

ಬೀದರ್‌: ತಾಲ್ಲೂಕಿನ ಬೆನಕನಹಳ್ಳಿ ರಸ್ತೆಯಲ್ಲಿ ಭಾನುವಾರ ವಾಹನ ತಪಾಸಣೆ ಮಾಡಲು ಬಂದ ಪೊಲೀಸರ ಮೇಲೆ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಿಗಳು ಕಾರು ಹತ್ತಿಸಲು ಯತ್ನಿಸಿದ್ದಾರೆ.

ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ವೇಗವಾಗಿ ಬಂದ ಕಪ್ಪು ಬಣ್ಣದ ಫೋರ್ಡ್‌ ಕಾರನ್ನು ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಅವರನ್ನು ನೋಡುತ್ತಿದ್ದಂತೆಯೇ ಚಾಲಕ ಅವರತ್ತ ನುಗ್ಗಿಸಲು ಯತ್ನಿಸಿದರು. ಪೊಲೀಸರು ಬೆನ್ನಟ್ಟಿದ್ದಾಗ ಸ್ವಲ್ಪ ದೂರು ಹೋಗಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಕಾರು ತಪಾಸಣೆ ಮಾಡಿದಾಗ ಡಿಕ್ಕಿಯಲ್ಲಿ ಗಾಂಜಾ ಪ್ಯಾಕ್‌ ಮಾಡಿದ ಒಟ್ಟು 25 ಕೆ.ಜಿ ತೂಕದ ಪ್ಯಾಕೆಟ್‌ಗಳು ದೊರೆತಿವೆ.

‘ಇಬ್ಬರು ವ್ಯಕ್ತಿಗಳು ಜಿಲ್ಲೆಯಲ್ಲಿ ಗಾಂಜಾ ಖರೀದಿಸಿ ಒಯ್ಯುತ್ತಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಕಾರಿನಲ್ಲಿ ವಾಹನದ ಕಾಗದಪತ್ರಗಳು ದೊರೆತ್ತಿದ್ದು, ಆರೋಪಿಗಳ ಸುಳಿವು ಸಿಕ್ಕಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ ತಿಳಿಸಿದರು.

ಬೀದರ್‌ ಗ್ರಾಮೀಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT