ಜಿಲ್ಲೆಯಲ್ಲಿ ಒಟ್ಟು 29,976 ಪ್ರಕರಣಗಳನ್ನು ಈ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಗೊಳಿಸಲಾಗಿದೆ. 10,521 ಪೆಂಡಿಂಗ್ ಪ್ರಕರಣಗಳು, 19,455 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಈ ಸಲ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹೆಚ್ಚು ಇತ್ಯರ್ಥಗೊಳಿಸಲು ಯೋಜನೆ ರೂಪಿಸಲಾಗಿದೆ. ಕಳೆದ ಸಲಕ್ಕಿಂತ ಈ ಸಲ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಗುರಿ ಹಾಕಿಕೊಳ್ಳಲಾಗಿದೆ. ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕೋರಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಜಗದೀಶ್ವರ ದೊರೆ, ಆಕಾಶ ಸಜ್ಜನ, ಜೀವನ್, ನಾಗರಾಜ ಹಾಜರಿದ್ದರು.