ಸೋಮವಾರ, ಸೆಪ್ಟೆಂಬರ್ 28, 2020
27 °C
ಸಾಯಿ ಸ್ಫೂರ್ತಿ, ಬಾಬು ಬಿರಾದಾರ ಪದವಿಪೂರ್ವ ವಿಜ್ಞಾನ ಕಾಲೇಜು

ಬೀದರ್: 33 ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ತೇರ್ಗಡೆಯಾಗಿ ಸಾಧನೆಗೈದ ಸಾಯಿ ಸ್ಫೂರ್ತಿ ಪದವಿಪೂರ್ವ ವಿಜ್ಞಾನ ಕಾಲೇಜು ಹಾಗೂ ಬಾಬು ಬಿರಾದಾರ ಪದವಿಪೂರ್ವ ವಿಜ್ಞಾನ ಕಾಲೇಜಿನ 33 ವಿದ್ಯಾರ್ಥಿಗಳನ್ನು ನಗರದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಮೇಶ ಬೇಜಗಂ ಶಾಲು ಹೊದಿಸಿ, ಹೂ ಮಾಲೆ ಹಾಕಿ ಸನ್ಮಾನಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಶಿಕ್ಷಣ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರ ಮಾರ್ಗದರ್ಶನ, ವಿದ್ಯಾರ್ಥಿಗಳ ಶ್ರಮ ಹಾಗೂ ಪಾಲಕರ ಸಹಕಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಗೆ 19ನೇ ಸ್ಥಾನ ಲಭಿಸಿದೆ ಎಂದು ಅವರು ಹೇಳಿದರು.

ಜಿಲ್ಲೆಯ ವಿದ್ಯಾರ್ಥಿಗಳು ವಿಜ್ಞಾನ, ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ ಎಂದು ತಿಳಿಸಿದರು.

ದ್ವಿತೀಯ ಪಿಯುಸಿ ನಂತರ ವಿದ್ಯಾರ್ಥಿಗಳ ಮುಂದೆ ಹಲವು ಆಯ್ಕೆಗಳು ಇವೆ. ಪಾಲಕರು ತಮ್ಮ ಮಕ್ಕಳಿಗೆ ಅವರ ಆಸಕ್ತಿಯ ಕೋರ್ಸ್ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಸಲಹೆ ಮಾಡಿದರು.

ಗುಣಮಟ್ಟದ ಶಿಕ್ಷಣದಿಂದಾಗಿ ಸಾಯಿಸ್ಫೂರ್ತಿ ಕಾಲೇಜು ಈ ಬಾರಿಯ ಫಲಿತಾಂಶದಲ್ಲಿ ನಗರದಲ್ಲಿ ಪ್ರಥಮ ಹಾಗೂ ಜಿಲ್ಲೆಯಲ್ಲಿ ತೃತೀಯ ಸ್ಥಾನ ಪಡೆದಿದೆ ಎಂದು ಹೇಳಿದರು.

ಸಾಯಿ ಸ್ಫೂರ್ತಿ ಕಾಲೇಜು ಪ್ರಾಚಾರ್ಯ ಚಂದ್ರಶೇಖರ ಬಿರಾದಾರ ಮಾತನಾಡಿ, ಕಾಲೇಜಿನಲ್ಲಿ ನುರಿತ, ಅನುಭವಿ ಉಪನ್ಯಾಸಕರು ಇದ್ದಾರೆ. ಉತ್ತಮ ಶೈಕ್ಷಣಿಕ ವಾತಾವರಣ ಇದೆ. ಪರಿಣಾಮವಾಗಿ, ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ದೊರಕಿದೆ. ಸಿಇಟಿ, ನೀಟ್‍ನಲ್ಲೂ ಒಳ್ಳೆಯ ಫಲಿತಾಂಶದ ನಿರೀಕ್ಷೆ ಇದೆ ಎಂದು ತಿಳಿಸಿದರು.

ಕಾಲೇಜು ಪಠ್ಯದ ಜತೆಗೆ ವಿವಿಧ ಉಪನ್ಯಾಸಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಶ್ರಮಿಸುತ್ತಿದೆ ಎಂದು ಹೇಳಿದರು.

ಶಿವಕುಮಾರ ಮಚಕೂರೆ, ಪಾಲಕರಾದ ಚಂದ್ರಕಾಂತ ಯದಲಾಪುರೆ, ಕವಿತಾ ಹಿರೇಮಠ ಮಾತನಾಡಿದರು.

ಉಪನ್ಯಾಸಕರಾದ ರಾಘವೇಂದ್ರ ಬಿ., ಗಜಾನಂದ, ವೀರೇಶ, ನಯಿಮ್‌ ಅಲಿ, ಶಿವಕುಮಾರ, ಶ್ರೀಕಾಂತ, ಶ್ರುತಿ, ಪೂಜಾ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಚನ್ನಬಸವೇಶ್ವರ ನಿರೂಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.