ಬೀದರ್: ಜಿಲ್ಲೆಯ 25 ಕೇಂದ್ರಗಳಲ್ಲಿ ಭಾನುವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದ 4110 ಅಭ್ಯರ್ಥಿಗಳ ಪೈಕಿ 3433 ಅಭ್ಯರ್ಥಿಗಳು ಪರೀಕ್ಷೆ ಬರೆದರು. 677 ಅಭ್ಯರ್ಥಿಗಳು ಗೈರಾಗಿದ್ದರು.

ನಗರದ ಗುರುನಾನಕ ಪಬ್ಲಿಕ್ ಸ್ಕೂಲ್ನಲ್ಲಿ 448, ಗುರುನಾನಕ ಪದವಿ ಪೂರ್ವ ಕಾಲೇಜಿನಲ್ಲಿ 263, ಗುರುನಾನಕ ಪದವಿ ಕಾಲೇಜಿನಲ್ಲಿ 307, ಬಿ.ವಿ.ಬಿ. ಕಾಲೇಜಿನಲ್ಲಿ 268, ಜೀಜಾಮಾತಾ ಹೆಣ್ಣು ಮಕ್ಕಳ ಪ್ರೌಢ ಶಾಲೆಯಲ್ಲಿ 222, ವಿ.ಕೆ.ಇಂಟರ್ ನ್ಯಾಷನ್ಲ್ ಶಾಲೆಯಲ್ಲಿ 252, ಕರ್ನಾಟಕ ಕಾಲೇಜಿನಲ್ಲಿ 236 ಅಭ್ಯರ್ಥಿಗಳು ಪರೀಕ್ಷೆ ಬರೆದರು.

ಕೋವಿಡ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಥರ್ಮಲ್ ಸ್ಕ್ಯಾನಿಂಗ್ ಮೂಲಕ ಅಭ್ಯರ್ಥಿಗಳ ಪರೀಕ್ಷೆ ನಡೆಸಿ ಕೇಂದ್ರದ ಒಳಗೆ ಪ್ರವೇಶ ನೀಡಲಾಯಿತು.

‘ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಕೋವಿಡ್ ಸಂಬಂಧ ಮುಂಜಾ
ಗ್ರತಾ ಕ್ರಮ ಕೈಗೊಳ್ಳಲಾಗಿತ್ತು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.