ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ | 36,533 ಯುವ ಮತದಾರರು

Published 6 ಮೇ 2024, 14:01 IST
Last Updated 6 ಮೇ 2024, 14:01 IST
ಅಕ್ಷರ ಗಾತ್ರ

ಬೀದರ್‌: ಬೀದರ್‌ ಲೋಕಸಭಾ ಚುನಾವಣೆಯಲ್ಲಿ 36,533 ಮತದಾರರು 18ರಿಂದ 19 ವರ್ಷ ವಯಸ್ಸಿನ ಮತದಾರರಿದ್ದಾರೆ.

ಬೀದರ್‌ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ಮತ ಕ್ಷೇತ್ರಗಳಲ್ಲಿ ಒಟ್ಟು 21,219 ಯುವಕರು, 15,313 ಯುವತಿಯರು ಮತದಾನದ ಹಕ್ಕು ಪಡೆದಿದ್ದಾರೆ. ಇದರಲ್ಲಿ ಹೆಚ್ಚಿನವರು ಮೊದಲ ಬಾರಿಗೆ ಹಕ್ಕು ಚಲಾಯಿಸಲು ಉತ್ಸುಕರಾಗಿದ್ದಾರೆ ಎಂದು ಜಿಲ್ಲಾ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು 5,470 ಯುವ ಮತದಾರರಿದ್ದರೆ, ಬೀದರ್‌ ಕ್ಷೇತ್ರದಲ್ಲಿ ಅತಿ ಕಡಿಮೆ 3,622 ಮತದಾರರು ನೋಂದಣಿ ಮಾಡಿಸಿದ್ದಾರೆ. ಇವರೆಲ್ಲರೂ 18ರಿಂದ 19 ವರ್ಷ ವಯಸ್ಸಿನೊಳಗಿನವರು. ಈ ಪೈಕಿ ಕೆಲವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಕ್ಕು ಚಲಾಯಿಸಿದರೆ, ಬಹುತೇಕರು ಮೊದಲ ಸಲ ಹಕ್ಕು ಚಲಾಯಿಸಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT