₹ 37 ಸಾವಿರ ಕೋಟಿ ಬೆಳೆ ಸಾಲ ಮನ್ನಾ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

7
ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ಹೇಳಿಕೆ

₹ 37 ಸಾವಿರ ಕೋಟಿ ಬೆಳೆ ಸಾಲ ಮನ್ನಾ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

Published:
Updated:
Deccan Herald

ಬೀದರ್: ‘ಬರುವ ಸಚಿವ ಸಂಪುಟದ ಸಭೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದ ₹ 37 ಸಾವಿರ ಕೋಟಿ ಬೆಳೆ ಸಾಲ ಮನ್ನಾ ಮಾಡುವ ಕುರಿತು ಚಿಂತನೆ ನಡೆದಿದೆ’ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ತಿಳಿಸಿದರು.

ಜಿಲ್ಲಾ ಆಡಳಿತದ ವತಿಯಿಂದ ನಗರದಲ್ಲಿ ಬುಧವಾರ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ಹಿಂದಿನ ಸಿದ್ದರಾಮಯ್ಯ ಸರ್ಕಾರ ಸಹಕಾರ ಬ್ಯಾಂಕ್‌ಗಳಲ್ಲಿ ಪಡೆದ ರೈತರ ತಲಾ ₹ 50 ಸಾವಿರ ವರೆಗಿನ ಒಟ್ಟು ₹ 8,165 ಕೋಟಿ ಸಾಲ ಮನ್ನಾ ಮಾಡಿದೆ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರೈತರ ತಲಾ ಒಂದು ಲಕ್ಷ ರೂಪಾಯಿ ವರೆಗಿನ ಒಟ್ಟು ₹ 9,448 ಕೋಟಿ ಬೆಳೆ ಸಾಲ ಮನ್ನಾ ಮಾಡಿದೆ. ಇದರಿಂದ ರೈತರಿಗೆ ದುಪ್ಪಟ್ಟು ಲಾಭ ಆಗಿದೆ’ ಎಂದು ಹೇಳಿದರು.

‘ದೇಶದಲ್ಲೇ ಮೊದಲ ಬಾರಿಗೆ ಮೊದಲ ಹಂತದಲ್ಲಿ ಬೆಳೆ ಸಾಲ ಮನ್ನಾ ಮಾಡಿದೆ. ಎರಡನೇ ಹಂತದಲ್ಲೂ ಸಾಲ ಮನ್ನಾ ಮಾಡಲು ಚಿಂತನೆ ನಡೆಸಿದೆ’ ಎಂದು ತಿಳಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !