ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

371(ಜೆ) ತಿದ್ದುಪಡಿ ಕಾಯ್ದೆ: ವಿಚಾರ ಸಂಕಿರಣ ಇಂದು

Last Updated 2 ಜನವರಿ 2021, 13:29 IST
ಅಕ್ಷರ ಗಾತ್ರ

ಬೀದರ್: ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಜ. 3 ರಂದು ಬೆಳಿಗ್ಗೆ 11.30ಕ್ಕೆ ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಕಾಯ್ದೆ ಸಾಧಕ-ಬಾಧಕ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.

ಸಮಿತಿಯ ಮುಖಂಡ ರಜಾಕ್ ಉಸ್ತಾದ್, ಕೆಆರ್‍ಇ ಸಂಸ್ಥೆ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಅಷ್ಟೂರ, ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ.ಜಿ. ಶೆಟಕಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಚಂದ್ರಕಾಂತ ನಾಸಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಸಮಿತಿಯ ವಿಭಾಗೀಯ ಉಪಾಧ್ಯಕ್ಷ ಪ್ರೊ. ದೇವೇಂದ್ರ ಕಮಲ್, ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷ ಶಂಕರರಾವ್ ಹೊನ್ನಾ, ವಕೀಲ ಅಶೋಕ ಮಾನೂರೆ, ಗಣಪತರಾವ್ ಮಂಗಳೂರೆ, ಶಿವರಾಜ ಪಾಟೀಲ, ಸುಭಾಷ ಗಾದಗೆ, ಬಸವರಾಜ ಪಾಟೀಲ, ಸುಧಾಕರ ಗಾದಗೆ ಹಾಗೂ ಚನ್ನಬಸಪ್ಪ ಹಾಲಹಳ್ಳಿ ಪಾಲ್ಗೊಳ್ಳಲಿದ್ದಾರೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಪಂಡಿತರಾವ್ ಚಿದ್ರಿ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ಬೆಲ್ದಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT