ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ | ಎಸ್ಸೆಸ್ಸೆಲ್ಸಿ: ಪರೀಕ್ಷೆ ಬರೆಯಲಿರುವ 4,953 ವಿದ್ಯಾರ್ಥಿಗಳು

Published 24 ಮಾರ್ಚ್ 2024, 15:18 IST
Last Updated 24 ಮಾರ್ಚ್ 2024, 15:18 IST
ಅಕ್ಷರ ಗಾತ್ರ

ಭಾಲ್ಕಿ: ತಾಲ್ಲೂಕಿನಲ್ಲಿ ಸೋಮವಾರದಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಪಾರದರ್ಶಕವಾಗಿ ನಡೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ್ ಹುಸೇನ್ ಹೇಳಿದರು.

ಪಟ್ಟಣದ ಪುರಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೊಠಡಿ ಮೇಲ್ವಿಚಾರಕರ ಸಭೆಯಲ್ಲಿ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮೂರು ಹಂತದಲ್ಲಿ ನಡೆಸಲಾಗುತ್ತಿದೆ. ಪರೀಕ್ಷೆಯಲ್ಲಿ ಅವ್ಯವಹಾರಕ್ಕೆ ಆಸ್ಪದ ಕೊಡದೆ, ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು.

ನೋಡಲ್ ಅಧಿಕಾರಿ ಸಹದೇವ ಜಿ.ಮಾತನಾಡಿ, ‘ಪ್ರಸ್ತುತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಾಲ್ಲೂಕಿನಲ್ಲಿ ಒಟ್ಟು 4,953 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 16 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿಯೂ ಪ್ರತಿಯೊಂದು ಕೋಣೆಗೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ನಂತರ ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿಯ ವ್ಯವಸ್ಥೆಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ, ನೋಡಲ್ ಅಧಿಕಾರಿ ಖುದ್ದಾಗಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT