ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಾಹೀನ್’ನಿಂದ ₹ 5 ಕೋಟಿ ವಿದ್ಯಾರ್ಥಿ ವೇತನ

ಮೂರು ಸಾವಿರ ವಿದ್ಯಾರ್ಥಿಗಳಿಗೆ ನೆರವು: ಅಬ್ದುಲ್ ಖದೀರ್
Last Updated 20 ಅಕ್ಟೋಬರ್ 2020, 15:43 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಶಾಹೀನ್ ಶಿಕ್ಷಣ ಸಂಸ್ಥೆಯು ಪ್ರಸಕ್ತ ಸಾಲಿನ ನೀಟ್ ದೀರ್ಘ ಕಾಲದ ರಿಪೀಟರ್ ತರಬೇತಿ ಹಾಗೂ ಇತರ ಕೋರ್ಸ್‍ಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ₹5 ಕೋಟಿಯ ವಿದ್ಯಾರ್ಥಿ ವೇತನ ಪ್ರಕಟಿಸಿದೆ.

ಕೊರೊನಾ ಹಾಗೂ ಅತಿವೃಷ್ಟಿಯಿಂದಾಗಿ ಪಾಲಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ನೀಟ್‍ನಲ್ಲಿ ಅಖಿಲ ಭಾರತ ಮಟ್ಟದಲ್ಲಿ 9ನೇ ಹಾಗೂ ಕರ್ನಾಟಕಕ್ಕೆ ಮೊದಲ ರ್‍ಯಾಂಕ್ ಗಳಿಸಿದ ಸಂಭ್ರಮದಲ್ಲಿರುವ ಸಂಸ್ಥೆಯು ವಿದ್ಯಾರ್ಥಿ ವೇತನದ ಮೂಲಕ
ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಲು ನಿರ್ಧರಿಸಿದೆ ಎಂದು ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ತಿಳಿಸಿದ್ದಾರೆ.

ಸಂಸ್ಥೆಯ ದೇಶದ ಎಲ್ಲ ಶಾಖೆಗಳಲ್ಲೂ ವಿದ್ಯಾರ್ಥಿ ವೇತನ ನೀಡಲಾಗುವುದು. ಕಲ್ಯಾಣ ಕರ್ನಾಟಕದ ಗ್ರಾಮೀಣ ಭಾಗದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ಕೊಡಲಾಗುವುದು ಎಂದು ಹೇಳಿದ್ದಾರೆ.

ನೀಟ್ ದೀರ್ಘಕಾಲದ ರಿಪೀಟರ್‌ಗಳಿಗೆ ನೀಟ್‍ನಲ್ಲಿ ಪಡೆದ ಅಂಕಗಳನ್ನು ಆಧರಿಸಿ ವಿದ್ಯಾರ್ಥಿ ವೇತನ ಕಲ್ಪಿಸಲಾಗುವುದು. ಸಂಸ್ಥೆಯ ಬೀದರ್ ಶಾಖೆಗೆ ಮಾತ್ರ ಅನ್ವಯಿಸುವಂತೆ ಪಿಯುಸಿ ಕಲಾ, ವಾಣಿಜ್ಯ, ಬಿ.ಎ., ಬಿ.ಎಸ್ಸಿ, ಬಿ.ಕಾಂ ಪ್ರವೇಶ ಹಾಗೂ ಕೇಂದ್ರ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಕೊಡಲಾಗುವುದು ಎಂದು ಹೇಳಿದ್ದಾರೆ.

ವಿದ್ಯಾರ್ಥಿ ವೇತನದಿಂದ ಮೂರು ಸಾವಿರ ವಿದ್ಯಾರ್ಥಿಗಳಿಗೆ ಪ್ರಯೋಜನ ಆಗುವ ನಿರೀಕ್ಷೆ ಇದೆ. ಕೊರೊನಾ ಕಾರಣದಿಂದ ಪಾಲಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಸಂಪೂರ್ಣ ನೀಟ್ ತರಬೇತಿ ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ವೆಬ್‍ಸೈಟ್ www.shaheengroup.org ನಲ್ಲಿ ಉಚಿತವಾಗಿ ಹೆಸರು ನೋಂದಾಯಿಸಿ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬಹುದು. ನೀಟ್ ದೀರ್ಘ ಕಾಲದ ರಿಪೀಟರ್ ತರಬೇತಿ ಪ್ರವೇಶಕ್ಕೆ ನವೆಂಬರ್ 1 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಟೊಲ್ ಫ್ರೀ ಸಂಖ್ಯೆ 18001216235ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

32 ವರ್ಷಗಳ ಹಿಂದೆ 16 ಮಕ್ಕಳಿಂದ ಆರಂಭವಾಗಿರುವ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಇಂದು 17 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಒಟ್ಟು 42 ಶಾಖೆಗಳನ್ನು ಹೊಂದಿದೆ. ಗುಣಮಟ್ಟದ ಶಿಕ್ಷಣದ ಮೂಲಕ ದ್ವಿತೀಯ ಪಿಯುಸಿ, ಸಿಇಟಿ, ನೀಟ್ ಫಲಿತಾಂಶದಲ್ಲಿ ರಾಜ್ಯ, ರಾಷ್ಟ್ರದ ಗಮನ ಸೆಳೆದಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT