ಬುಧವಾರ, ಮಾರ್ಚ್ 22, 2023
19 °C

ಸಿಡಿಲು ಬಡಿದು ಸಾವು: ₹5 ಲಕ್ಷ ಪರಿಹಾರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಸಿಡಿಲು ಬಡಿದು ಮೃತಪಟ್ಟ ಬೀದರ್ ತಾಲ್ಲೂಕಿನ ಕಾಶೆಂಪೂರ (ಪಿ) ಗ್ರಾಮದ ಚಿದಾನಂದ ಅವರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ₹5 ಲಕ್ಷದ ಚೆಕ್‍ನ್ನು ಶಾಸಕ ಬಂಡೆಪ್ಪ ಕಾಶೆಂಪೂರ್ ಗ್ರಾಮದಲ್ಲಿ ಬುಧವಾರ ವಿತರಿಸಿದರು.

‘ಮೃತರ ಪತ್ನಿಗೆ ವಿಧವಾ ವೇತನ ಮಂಜೂರು ಮಾಡಬೇಕು. ರಾಷ್ಟ್ರೀಯ ಭದ್ರತಾ ಯೋಜನೆ ಪರಿಹಾರ ಹಾಗೂ ಶವ ಸಂಸ್ಕಾರ ಹಣ ಬೇಗ ದೊರಕಿಸಿಕೊಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಅರ್ಹರಿಗೆ ವೃದ್ಧಾಪ್ಯ ವೇತನ, ವಿಧವಾ ವೇತನ ಮಂಜೂರು ಮಾಡಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

ತಹಶೀಲ್ದಾರ್ ಗಂಗಾದೇವಿ, ಗ್ರಾಮ ಪಂಚಾಯಿತಿ ಸದಸ್ಯರಾದ ಬಜರಂಗ ತಮಗೊಂಡ, ಶಿವಕುಮಾರ, ಮಂಜುನಾಥ, ಮೋಹನ್ ಸಾಗರ, ನರಸಪ್ಪ ಬಜಗೊಂಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.