ಮಂಗಳವಾರ, ಅಕ್ಟೋಬರ್ 27, 2020
18 °C

ಜನವಾಡ: 50 ಕೆ.ಜಿ ಗಾಂಜಾ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹5 ಲಕ್ಷ ಮೌಲ್ಯದ 50 ಕೆ.ಜಿ. ಗಾಂಜಾವನ್ನು ಪೊಲೀಸರು ಬೀದರ್- ವಡಗಾಂವ್ ಮುಖ್ಯ ರಸ್ತೆಯ ಬೀದರ್ ತಾಲ್ಲೂಕಿನ ನವಲಸಪುರ ಕ್ರಾಸ್ ಹತ್ತಿರ ಗುರುವಾರ ವಶಪಡಿಸಿಕೊಂಡಿದ್ದಾರೆ.

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೊಂಡಾಪುರ ಮಂಡಲದ ದಬಕುಂಟಾ ತಾಂಡಾದ ದೇವಿದಾಸ ಲಕ್ಷ್ಮಣ ರಾಠೋಡ್ ಎಂಬಾತನನ್ನು ಬಂಧಿಸಿದ್ದು, ಕಾರ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಜನವಾಡ ಪಿಎಸ್‍ಐ ಶಿವರಾಜ ಪಾಟೀಲ, ಸಿಬ್ಬಂದಿ ರಾಜು, ರವೀಂದ್ರ ಸಪಾಟೆ, ಪ್ರಭಾಕರ, ಬಾಬುಶೆಟ್ಟಿ, ಇಸ್ಮಾಯಿಲ್ ಹಾಗೂ ಜೀಪ್ ಚಾಲಕ ಪ್ರಭಾಕರ ಈ ದಾಳಿ ನಡೆಸಿದ್ದಾರೆ.

ತೆಲಂಗಾಣದ ಸಂಗಾರೆಡ್ಡಿ ಕಡೆಯಿಂದ ಮಹಾರಾಷ್ಟ್ರಕ್ಕೆ ಗಾಂಜಾ ಸಾಗಣೆ ಮಾಡಲಾಗುತ್ತಿತ್ತು. ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.