ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ | 52 ಮೊಬೈಲ್‌ ಪತ್ತೆ ಹಚ್ಚಿ ವಾರಸುದಾರರಿಗೆ ವಾಪಸ್‌ ನೀಡಿದ ಪೊಲೀಸರು

Published 13 ಮೇ 2024, 16:26 IST
Last Updated 13 ಮೇ 2024, 16:26 IST
ಅಕ್ಷರ ಗಾತ್ರ

ಬೀದರ್‌: ಇಲ್ಲಿನ ನೂತನ ನಗರ ಠಾಣೆ ಪೊಲೀಸರು 52 ಮೊಬೈಲ್‌ಗಳನ್ನು ಪತ್ತೆ ಹಚ್ಚಿ, ವಾರಸುದಾರರಿಗೆ ನಗರದಲ್ಲಿ ಸೋಮವಾರ ಹಿಂತಿರುಗಿಸಿದರು.

₹12 ಲಕ್ಷ ಮೊತ್ತದ 52 ಮೊಬೈಲ್‌ಗಳನ್ನು ಸಾರ್ವಜನಿಕರು ಕಳೆದುಕೊಂಡಿದ್ದರು. ಈ ಕುರಿತು ಈ–ಲಾಸ್ಟ್‌ ಮತ್ತು ಸಿಇಐಆರ್‌ ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದರು. ಮೊಬೈಲ್‌ಗಳ ಪತ್ತೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌. ಅವರು ತಂಡ ರಚಿಸಿದ್ದರು. ತಂಡವು ಸೈಬರ್‌ ಹಾಗೂ ಅಪರಾಧ ವಿಭಾಗದ ನೆರವಿನೊಂದಿಗೆ ಮೊಬೈಲ್‌ಗಳನ್ನು ಪತ್ತೆ ಹಚ್ಚಿದೆ.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ವಾರಸುದಾರರನ್ನು ಕರೆಸಿ, ಅವರಿಗೆ ಮೊಬೈಲ್‌ಗಳನ್ನು ಹಿಂತಿರುಗಿಸಿದರು.

‘ಸಾರ್ವಜನಿಕರು ಮೊಬೈಲ್‌ಗಳನ್ನು ಕಳೆದುಕೊಂಡರೆ ಅಥವಾ ಯಾರಾದರೂ ಕಳವು ಮಾಡಿದರೆ ಈ–ಲಾಸ್ಟ್‌ ಅಥವಾ ಸಿಇಐಆರ್‌ ಪೋರ್ಟಲ್‌ನಲ್ಲಿ ದೂರು ದಾಖಲಿಸಿದರೆ ಪತ್ತೆ ಹಚ್ಚಿ ಹಿಂತಿರುಗಿಸಲಾಗುವುದು’ ಎಂದು ಎಸ್ಪಿ ಚನ್ನಬಸವಣ್ಣ ಎಸ್‌.ಎಲ್‌. ತಿಳಿಸಿದರು.

ಮೊಬೈಲ್‌ಗಳ ಪತ್ತೆಗೆ ರಚಿಸಲಾಗಿದ್ದ ತಂಡದಲ್ಲಿ ಡಿವೈಎಸ್ಪಿ ಶಿವನಗೌಡ ಪಾಟೀಲ, ನೂತನ ನಗರ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂತೋಷ ಎಲ್‌.ಟಿ., ಗಣಕಯಂತ್ರ ವಿಭಾಗದ ಸಿಬ್ಬಂದಿ ಸಚಿನ್‌, ಸಂತೋಷ, ಅಪರಾಧ ವಿಭಾಗದ ಸಿಬ್ಬಂದಿ ರಾಮಣ್ಣ, ಧನರಾಜ, ಮಲ್ಲಿಕಾರ್ಜುನ, ಭರತ ಹಾಗೂ ನಿಂಗಪ್ಪ ಹಾಜರಿದ್ದರು.

ಪತ್ತೆ ಹಚ್ಚಿರುವ ವಿವಿಧ ಕಂಪನಿಯ 52 ಮೊಬೈಲ್‌ಗಳು
ಪತ್ತೆ ಹಚ್ಚಿರುವ ವಿವಿಧ ಕಂಪನಿಯ 52 ಮೊಬೈಲ್‌ಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT