ಕ್ರೀಡೆ: ಗುರುನಾನಕ ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

7

ಕ್ರೀಡೆ: ಗುರುನಾನಕ ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Published:
Updated:
Deccan Herald

ಬೀದರ್: ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕಿಯರ ವಿಭಾಗದ ಶಟಲ್‌ ಬ್ಯಾಡ್ಮಿಂಟನ್‌ ಹಾಗೂ ಬಾಲಕ ಮತ್ತು ಬಾಲಕಿಯರ ವಿಭಾಗದ ಹ್ಯಾಂಡ್‌ಬಾಲ್ ಸ್ಪರ್ಧೆಯಲ್ಲಿ ಇಲ್ಲಿಯ ಗುರುನಾನಕ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಾಲ್ಲೂಕಿನ ಕಮಠಾಣ ಬಳಿಯ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದ ಶಟಲ್‌ ಬ್ಯಾಡ್ಮಿಂಟನ್‌ ಹಾಗೂ ಹ್ಯಾಂಡ್‌ಬಾಲ್‌ ಸ್ಪರ್ಧೆಯಲ್ಲಿ ಅವರು ಉತ್ತಮ ಪ್ರದರ್ಶನ ತೋರಿದರು.

ದೈಹಿಕ ಶಿಕ್ಷಣ ನಿರ್ದೇಶಕ ಜಯಪ್ರಕಾಶ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಎರಡೂ ಸ್ಪರ್ಧೆಗಳಲ್ಲಿ ಸತತ ಮೂರನೇ ವರ್ಷ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆ ಸಂತಸ ಉಂಟು ಮಾಡಿದೆ ಎಂದು ಗುರುನಾನಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸರ್ದಾರ್ ಬಲ್‌ಬೀರಸಿಂಗ್, ಉಪಾಧ್ಯಕ್ಷೆ ರೇಷ್ಮಾ ಕೌರ್ ತಿಳಿಸಿದ್ದಾರೆ.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !