ಸರ್ಕಾರಿ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗೆ ಆಡಳಿತಾಧಿಕಾರಿ ನೇಮಕ

ಗುರುವಾರ , ಜೂಲೈ 18, 2019
22 °C

ಸರ್ಕಾರಿ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗೆ ಆಡಳಿತಾಧಿಕಾರಿ ನೇಮಕ

Published:
Updated:

ಬೀದರ್: ‘ಆಡಳಿತ ವೈಫಲ್ಯದಿಂದಾಗಿಯೇ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ಮುಂದುವರಿದಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇಂತಹ ಆಸ್ಪತ್ರೆಗಳಿಗೆ ಕೆಎಎಸ್ ಶ್ರೇಣಿಯವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ ತಿಳಿಸಿದರು.

‘ಬೋಧಕ ಆಸ್ಪತ್ರೆಗಳಿಗೆ ಹಣಕಾಸು ಸಲಹೆಗಾರರನ್ನೂ ನೇಮಿಸಲಾಗುವುದು’ ಎಂದು ಬುಧವಾರ ಇಲ್ಲಿ ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಗವರ್ನಿಂಗ್‌ ಕೌನ್ಸಿಲ್‌ ಸಭೆಯ ನಂತರ ತಿಳಿಸಿದರು.

‘ಇಲ್ಲಿಯ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಇರುವ ಕಾರಣ ಭಾರತೀಯ ವೈದ್ಯಕೀಯ ಮಂಡಳಿ(ಎಂಸಿಐ)ಯು ಎಂಬಿಬಿಎಸ್‌ನ 50 ಸೀಟುಗಳನ್ನು ಕಡಿತಗೊಳಿಸಲಿದೆ ಎಂಬ ಆತಂಕ ಬೇಡ. ಬೀದರ್‌ ಹಾಗೂ ಕಾರವಾರದ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಎಂಸಿಐ ನಿಯಮಾವಳಿ ಪ್ರಕಾರ ಸಕಲ ಸೌಲಭ್ಯ ಕಲ್ಪಿಸಿ ಅನುಮತಿ ಪಡೆದುಕೊಳ್ಳಲಾಗುವುದು’ ಎಂದರು.

‘ಆಸ್ಪತ್ರೆಯಲ್ಲಿ ಹಿರಿಯ ವೈದ್ಯರು ರೋಗಿಗಳಿಗೆ ಚಿಕಿತ್ಸೆ ಕೊಡುತ್ತಿಲ್ಲ ಎನ್ನುವ ದೂರುಗಳು ಇವೆ. ಸಿಸಿಟಿವಿ ಕ್ಯಾಮೆರಾ ಮೂಲಕ ಅವರ ಮೇಲೆ ನಿಗಾ ಇಡುವ ಕುರಿತು ಪರಿಶೀಲಿಸಲಾಗುವುದು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !